×
Ad

ಖಾಲಿ ಹುದ್ದೆಗಳ ಭರ್ತಿಗೆ ಒತ್ತಾಯಿಸಿ ನರ್ಸ್‌ಗಳ ಧರಣಿ

Update: 2017-11-21 18:52 IST

ಬೆಂಗಳೂರು, ನ.21: ಖಾಲಿ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಬೇಕು ಎಂದು ಒತ್ತಾಯಿಸಿ ನಿಮ್ಹಾನ್ಸ್ ಸಂಸ್ಥೆಯ ನರ್ಸ್‌ಗಳು ಧರಣಿ ನಡೆಸಿ ಸರಕಾರವನ್ನು ಆಗ್ರಹಿಸಿದರು.

ಮಂಗಳವಾರ ಹೊಸೂರು ರಸ್ತೆಯ ನಿಮ್ಹಾನ್ಸ್ ಸಂಸ್ಥೆಯ ಆವರಣದಲ್ಲಿ ನೂರಾರು ದಾದಿಯತು ಧರಣಿ ನಡೆಸಿ, ಆಸ್ಪತ್ರೆಯ ಗುಣಮಟ್ಟ ಹಾಗೂ ಖಾಲಿ ಇರುವ ಹುದ್ದೆಗಳನ್ನು ಶೀಘ್ರದಲ್ಲಿಯೇ ಭರ್ತಿ ಮಾಡುವಂತೆ ಒತ್ತಾಯಿಸಿದರು.

ಧರಣಿಯನ್ನುದ್ದೇಶಿಸಿ ಮಾತನಾಡಿದ ಶುಶ್ರೂಕ ರಂಜಿತ್, ನಿಮ್ಹಾನ್ಸ್ ಸಂಸ್ಥೆ ದೇಶದಲ್ಲೇ ಅತ್ಯುತ್ತಮ ಸಂಸ್ಥೆಯಾಗಿದ್ದು, ವರ್ಷಕ್ಕೆ ಲಕ್ಷಾಂತರ ಬಡ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡುತ್ತಿದೆ. ಆದರೆ, ಇಲ್ಲಿ ಮಂಜೂರಾಗಿರುವ ಹುದ್ದೆಗಳ ಪೈಕಿ ಅರ್ಧದಷ್ಟು ಹುದ್ದೆಗಳು ಮಾತ್ರ ಭರ್ತಿಯಾಗಿದ್ದು, ಅರ್ಧದಷ್ಟು ಹುದ್ದೆಗಳು ಖಾಲಿ ಇವೆ ಎಂದು ಆರೋಪಿಸಿದರು.

ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಇದರಿಂದ ಪ್ರತಿವರ್ಷ ಸಂಸ್ಥೆಯನ್ನು ವಿಸ್ತರಿಸಲಾಗುತ್ತಿದೆ. ಹೊಸ ಕಟ್ಟಡ, ಹೊಸ ಭಾಗಗಳನ್ನು ತೆರೆಯಲಾಗುತ್ತಿದೆ. ಆದರೆ, ನರ್ಸ್‌ಗಳು ಮತ್ತು ಇತರ ಸಿಬ್ಬಂದಿಯ ನೇಮಕಾತಿ ಮಾಡುತ್ತಿಲ್ಲ. ಇರುವ ಸಿಬ್ಬಂದಿಗೆ ಹೆಚ್ಚುವರಿ ಕೆಲಸ ವಹಿಸಿಕೊಡಲಾಗುತ್ತಿದೆ ಎಂದು ದೂರಿದರು.

ಒಟ್ಟು 1,278 ಹುದ್ದೆಗಳು ನಿಮ್ಹಾನ್ಸ್‌ಗೆ ಮಂಜೂರಾಗಿದೆ. ಅದರಲ್ಲಿ ಕೇವಲ 434 ಹುದ್ದೆಗಳನ್ನು ಮಾತ್ರ ಭರ್ತಿ ಮಾಡಲಾಗಿದೆ ಎಂದು ಆರೋಪಿಸಿದ ಅವರು, ಈ ಕೂಡಲೇ ಸರಕಾರ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು. ಇಲ್ಲದಿದ್ದರೆ ಮುಷ್ಕರ ಮುಂದುವರಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News