×
Ad

ಮದನಿ ಕಾಲೇಜಿನಲ್ಲಿ ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು ಶಿಬಿರ

Update: 2017-11-21 20:10 IST

ಮಂಗಳೂರು, ನ.21: ಉಳ್ಳಾಲ ಅಳೇಕಲದ ಮದನಿ ಪದವಿ ಪೂರ್ವ ಕಾಲೇಜಿನಲ್ಲಿ ಉಪನ್ಯಾಸಕ-ಪೋಷಕ-ವಿದ್ಯಾರ್ಥಿ ಸಮಾವೇಶದಲ್ಲಿ ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು ಶಿಬಿರ ಏರ್ಪಡಿಸಲಾಯಿತು.

ಮಂಗಳೂರು ಸೈಬರ್ ಎಕಾನಮಿಕ್ ಮತ್ತು ನಾರ್ಕೋಟಿಕ್ ಡ್ರಗ್ಸ್ ಅಪರಾಧ ವಿಭಾಗದ ಇನ್‌ಸ್ಪೆಕ್ಟರ್ ಕೆ.ಎಂ ಶರೀಫ್ ಹಾಗೂ ಲಿಂಕ್ಸ್ ಅಮಲ್ ಚಿಕಿತ್ಸಾ ಕೇಂದ್ರದ ಮುಖ್ಯಸ್ಥೆ ಲಿಡಿಯಾ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದರು.

ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್‌ನ ಉಳ್ಳಾಲ ವಲಯದ ನಿಕಟಪೂರ್ವ ಅಧ್ಯಕ್ಷ ಕೆ. ಮುಹಮ್ಮದ್ ‘ಮಾದಕ ಮುಕ್ತ ಸಮಾಜ’ ಎಂಬ ವಿಷಯದ ಬಗ್ಗೆ ಮಾತನಾಡಿದರು.

ವೇದಿಕೆಯಲ್ಲಿ ಆಡಳಿತ ಮಂಡಳಿ ಕಾರ್ಯದರ್ಶಿ ಪಂಡಿತ್ ಮುಹಮ್ಮದ್, ಪಿ.ಯು.ವಿಭಾಗದ ಸಂಚಾಲಕ ಯು.ಎಂ. ಇಬ್ರಾಹೀಂ ಉಪಸ್ಥಿತರಿದ್ದರು. ಸಂಸ್ಥೆಯ ಪ್ರಾಂಶುಪಾಲ ಹಾಜಿ ಬಿ. ಮೂಸಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕರಾದ ಟಿ. ಇಸ್ಮಾಯೀಲ್ ಸ್ವಾಗತಿಸಿದರು. ಹಬೀಬ್ ರಹ್ಮಾನ್ ಕಾರ್ಯಕ್ರಮ ನಿರೂಪಿಸಿದರು. ಮುಹಮ್ಮದ್ ಫಾಝಿಲ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News