ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ
Update: 2017-11-21 21:32 IST
ಬ್ರಹ್ಮಾವರ, ನ.21: ಯುವಕನೊರ್ವ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ನ.21ರಂದು ಬೆಳಗ್ಗೆ 9.45ರ ಸುಮಾರಿಗೆ ನಡೆದಿದೆ.
ಮೃತರನ್ನು ಹಳ್ಳಾಡಿ ಹರ್ಕಾಡಿ ಗ್ರಾಮದ ಜನತಾ ಕಾಲನಿಯ ಅಣ್ಣಾದೊರೈ ಎಂಬವರ ಮಗ ಜೀವನ್ ಕುಮಾರ್(25) ಎಂದು ಗುರುತಿಸಲಾಗಿದೆ. ಈತ ಕಾವಡಿ ಗ್ರಾಮ ಮೂಡುತೋಟ ಸಮೀಪ ಬಾರ್ಕೂರು ಕಡೆಯಿಂದ ಕುಂದಾ ಪುರ ಕಡೆಗೆ ಹೋಗುತ್ತಿದ್ದ ರೈಲಿನಡಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿ ದ್ದಾನೆ. ಆದರೆ ಆತ್ಮಹತ್ಯೆಗೆ ಕಾರಣ ಈವರೆಗೆ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.