×
Ad

ಸಿಬಿಐ ಅಧಿಕಾರಿಯ ಸೋಗಿನಲ್ಲಿ ವಂಚಿಸುತ್ತಿದ್ದವನ ಬಂಧನ: 26 ಲಕ್ಷ ರೂ. ವಶ

Update: 2017-11-22 16:06 IST

ಹೈದರಾಬಾದ್, ನ.22: ಸಿಬಿಐ ಅಧಿಕಾರಿಯೆಂದು ಹೇಳಿ ಜನರಿಗೆ ಮೋಸ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿರುವ ಪೊಲೀಸರು ಆತನಲ್ಲಿದ್ದ 26 ಲಕ್ಷ ರೂ.ಗಳನ್ನು ವಶಪಡಿಸಿಕೊಂಡಿದ್ದಾರೆ.

ಹೈದರಾಬಾದ್ ಐಜಿಐ ವಿಮಾನ ನಿಲ್ದಾಣದಲ್ಲಿ ಈತನನ್ನು ಬಂಧಿಸಲಾಗಿದೆ. ಸಿಬಿಐ ಅಧಿಕಾರಿಯೆಂದು ಜನರನ್ನು ನಂಬಿಸಿ ಮೋಸ ಮಾಡುತ್ತಿದ್ದ ಎಂ. ನಾಗೇಶ್ವರ ರಾವ್‍ ಎಂಬವನನ್ನು ಪೊಲೀಸರು ಬಂಧಿಸಿದ್ದಾರೆ. ಈತನಿಂದ ಸಿಬಿಐ ಅಧಿಕಾರಿಗಳ ನಕಲಿ ಗುರುತು ಚೀಟಿ, ಅಧಿಕೃತ ಕವರ್‍ಗಳನ್ನು ಕೂಡಾ ವಶಪಡಿಸಿಕೊಂಡಿದ್ದಾರೆ.

ಖಾಸಗಿ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದ ರಾವ್‍ನನ್ನು ಅಸೌಖ್ಯದ ಕಾರಣದಿಂದ ಕೆಲಸದಿಂದ ತೆಗೆದು ಹಾಕಲಾಗಿತ್ತು. ವಿಜಯವಾಡಕ್ಕೆ ಹೋದ ರಾವ್  ಹಣ ಸಂಪಾದಿಸಲು ಸಿಬಿಐ ಅಧಿಕಾರಿ ಎಂದು ಹೇಳಿ ಜನರನ್ನು ವಂಚಿಸುತ್ತಿದ್ದ. ಆರೋಪಿಯನ್ನು ಕೋರ್ಟಿಗೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News