ಮಾದಕ ವಸ್ತು ಮಾರಾಟ: ನೈಜೀರಿಯಾ ಪ್ರಜೆ ಬಂಧನ
Update: 2017-11-22 17:57 IST
ಬೆಂಗಳೂರು, ನ.22: ಕೊಕೇನ್ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನೈಜೀರಿಯಾ ದೇಶದ ಪ್ರಜೆಯೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಖೆನ್ನೆತ್ ನವಭನೆ (24) ಎಂಬಾತ ಬಂಧಿತ ನೈಜೀರಿಯಾ ದೇಶ ಪ್ರಜೆ ಎಂದು ಪೊಲೀಸರು ಗುರುತಿಸಿದ್ದು, ಈತ ರಾಮಮೂರ್ತಿ ನಗರದಲ್ಲಿ ವಾಸವಾಗಿದ್ದ ಎಂದು ತಿಳಿದು ಬಂದಿದೆ.
ನಗರದ ಕೆಆರ್ ಪುರಂನ ರಿಲಯನ್ಸ್ ಫ್ರೆಶ್ ಮುಂಭಾಗ ಮಾದಕ ವಸ್ತು ಕೊಕೇನ್ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಸಂಗ್ರಹಿಸಿ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ ಎಂದು ಸಿಸಿಬಿ ತಿಳಿಸಿದೆ.
ಪ್ರಕರಣ ಸಂಬಂಧ ಆರೋಪಿಯಿಂದ 5 ಗ್ರಾಂ ಕೊಕೇನ್, ಮೊಬೈಲ್ ಸೇರಿ 30 ಸಾವಿರ ಮೌಲ್ಯದ ಮಾಲುಗಳನ್ನು ಜಪ್ತಿ ಮಾಡಿ, ಇಲ್ಲಿನ ಕೆಆರ್‌ಪುರಂ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲು ಮಾಡಲಾಗಿದೆ ಎಂದು ಸಿಸಿಬಿ ಹೇಳಿದೆ.