×
Ad

ಡಿ.3 ರಂದು ಗೊಲ್ಲರ ಸಂಘದ ಚುನಾವಣೆ

Update: 2017-11-22 18:03 IST

ಬೆಂಗಳೂರು, ನ.22: ಕರ್ನಾಟಕ ರಾಜ್ಯ ಗೊಲ್ಲ(ಯಾದವ) ಸಂಘದ ಸರ್ವ ಸದಸ್ಯರ ಸಭೆ ಹಾಗೂ ಆಡಳಿತ ಮಂಡಳಿ ಚುನಾವಣೆಯನ್ನು ಡಿ.3 ರಂದು ಬನಶಂಕರಿ ಬಳಿಯಿರುವ ಕೃಷ್ಣ ಕನ್ವೆನ್‌ಷನ್ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಬಿ.ಎಸ್.ಲಕ್ಷ್ಮೀಪತಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಡಳಿತ ಮಂಡಳಿಯ ಅಧ್ಯಕ್ಷ, ಉಪಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ ಹಾಗೂ ಜಂಟಿ ಕಾರ್ಯದರ್ಶಿ ಸ್ಥಾನಗಳಿಗೆ ಆಸಕ್ತರಿಂದ ಅರ್ಜಿ ಆಹ್ವಾನಿಸಿ, ಅಂತಿಮ ಪಟ್ಟಿ ಪ್ರಕಟಿಸಿ ಚಿಹ್ನೆಗಳನ್ನು ಪ್ರಕಟಿಸಲಾಗಿದೆ. ಹೀಗಾಗಿ, ಸಂಘದ ಎಲ್ಲ ಸದಸ್ಯರು ತಮ್ಮ ಮತವನ್ನು ಚಲಾಯಿಸಬೇಕು ಎಂದು ಅವರು ಮನವಿ ಮಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News