ಹನೂರು: ಸಾಮಾಜಿಕ ಪರಿಶೋಧನಾ ಗ್ರಾಮ ಸಭೆ

Update: 2017-11-22 13:28 GMT

ಹನೂರು, ನ.22:  ಕೃಷಿ ಆಧಾರಿತ ಕಾಮಗಾರಿಗಳಿಗೆ ಹೆಚ್ಚು ಒತ್ತು ನೀಡಿ ಉದ್ಯೋಗ ಖಾತ್ರಿ ಯೋಜನೆಯ ಅನುದಾನಗಳನ್ನು ಬಳಕೆ ಮಾಡಿರುವುದು ಉತ್ತಮ ಬೆಳವಣಿಗೆ ಎಂದು ತಾಲೂಕು ಸಂಯೋಜಕ ಮನೋಹರ್‍ ಅಭಿಪ್ರಾಯಪಟ್ಟಿದ್ದಾರೆ.

ತಾಲೂಕಿನ ಮಿಣ್ಯಂ ಗ್ರಾಮ ಪಂಚಾಯತ್ ನಲ್ಲಿ ಆಯೋಜಿಸಿದ್ದ  2017-18ನೆ ಸಾಲಿನ ಎರಡನೆ ಸುತ್ತಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ನರೇಗಾ ಯೋಜನೆಯಡಿ ಎರಡನೆ ಅವಧಿಯಲ್ಲಿ 89 ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, 21.68 ಲಕ್ಷ ರೂ.ವೆಚ್ಚ ಮಾಡಲಾಗಿದೆ ಎಂದವರು, ನರೇಗಾ ಯೋಜನೆಯಡಿ ಉದ್ಯೋಗ ಕೇಳುವುದು ಪ್ರತಿಯೊಬ್ಬರ ಹಕ್ಕಾಗಿದೆ. ಒಂದೊಮ್ಮೆಗ್ರಾಮಸ್ಥರು ಉದ್ಯೋಗ ಕೇಳಿಯೂ ಪಂಚಾಯತ್ ವತಿಯಿಂದ ಉದ್ಯೋಗ ನೀಡಲಾಗದ ಸಂದರ್ಭದಲ್ಲಿ ನಿರುದ್ಯೋಗ ಭತ್ಯೆ ನೀಡಲಾಗುವುದು. ಆದುದರಿಂದ ಪ್ರತಿಯೊಬ್ಬರೂ ಉದ್ಯೋಗ ಚೀಟಿಯ ಪ್ರಾಮುಖ್ಯತೆಯನ್ನು ತಿಳಿದುಕೊಂಡು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.

ಸಭೆಯಲ್ಲಿ ಗ್ರಾ.ಪಂ ಅಧ್ಯಕ್ಷೆ ಮಹದೇವಮ್ಮ, ನೋಡಲ್ ಅಧಿಕಾರಿ ಮಹದೇವ ಪ್ರಸಾದ್ , ಪಿಡಿಒ ಬಾಲಗಂಗಾಧರ್, ಮಿಣ್ಯಂ ಶಾಲೆಯ ಮುಖ್ಯ ಶಿಕ್ಷಕ ಬಾಲುನಾಯ್ಕ ಇನ್ನಿತರರು ಹಾಜರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News