ಎನ್‌ಸಿಪಿ ಸಂಸದೆ ಸುಪ್ರಿಯಾ ಸುಳೆ ವಿರುದ್ಧ ಆಕ್ಷೇಪಾರ್ಹ ಟ್ಪೀಟ್: ಪ್ರಕರಣ ದಾಖಲು

Update: 2017-11-22 14:09 GMT

 ಥಾಣೆ, ನ. 22: ಮೈಕ್ರೊ ಬ್ಲಾಗಿಂಗ್ ಸೈಟ್‌ನಲ್ಲಿ ಎನ್‌ಸಿಪಿ ಸಂಸದೆ ಸುಪ್ರಿಯಾ ಸುಳೆ ಬಗ್ಗೆ ಆಕ್ಷೇಪಾರ್ಹ ಟ್ವೀಟ್ ಪೋಸ್ಟ್ ಮಾಡಿದ ಓರ್ವನ ವಿರುದ್ಧ ಇಂದು ಪ್ರಕರಣ ದಾಖಲಿಸಲಾಗಿದೆ ಎಂದು ನಗರ ಪೊಲೀಸರು ತಿಳಿಸಿದ್ದಾರೆ.

ಎನ್‌ಸಿಪಿ ಶಾಸಕ ಜಿತೇಂದ್ರ ಅವದ್ ನಿನ್ನೆ ದಾಖಲಿಸಿದ ದೂರು ಆಧರಿಸಿ ವರ್ತಕ್ ನಗರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

  ಎನ್‌ಸಿಪಿ ನಾಯಕಿ ಸುಪ್ರಿಯಾ ಸುಳೆ ಅವರ ಬಗ್ಗೆ ಆಕ್ಷೇಪಾರ್ಹ ಟ್ವೀಟ್ ಪೋಸ್ಟ್ ಮಾಡಿದ ವಾಲ್‌ಚಂದ್ ಗಿಟ್ಟೀ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಆಕ್ಷೇಪಾರ್ಹ ಹೇಳಿಕೆಯಿಂದ ಕಾರ್ಯಕರ್ತರ ಭಾವನೆಗಳಿಗೆ ಧಕ್ಕೆ ಉಂಟಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ಸಂಬಂಧ ಇದುವರೆಗೆ ಯಾರನ್ನೂ ಬಂಧಿಸಿಲ್ಲ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News