ನ.25: ಇಂದಿರಾ ಜನ್ಮಶತಮಾನೋತ್ಸವ ಸಮಾರೋಪ ಸಮಾವೇಶ
ಉಡುಪಿ, ನ.22: ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಇಂದಿರಾ ಗಾಂಧಿ ಜನ್ಮ ಶತಮಾನೋತ್ಸವದ ಪ್ರಯುಕ್ತ ಸಮಾರೋಪ ಸಮಾ ವೇಶವನ್ನು ನ.25ರಂದು ಬೆಳಗ್ಗೆ 11ಗಂಟೆಗೆ ಉಡುಪಿ ಅಜ್ಜರಕಾಡು ಪುರಭವನ ದಲ್ಲಿ ಆಯೋಜಿಸಲಾಗಿದೆ.
ಬೆಳಗ್ಗೆ 10:30ಕ್ಕೆ ಭುಜಂಗ ಪಾರ್ಕ್‌ನಲ್ಲಿರುವ ಗಾಂಧಿ ಪ್ರತಿಮೆಗೆ ಮಾಲಾ ರ್ಪಣೆ ಮಾಡಿ ಮೆರವಣಿಗೆ ಮೂಲಕ ಪ್ರತಿ ಬ್ಲಾಕ್‌ನ 100 ಮಹಿಳೆಯರು ಹಣತೆಯೊಂದಿಗೆ ಇಂದಿರಾ ಗಾಂಧಿಗೆ 100 ದೀಪ ನಮನವನ್ನು ಸಲ್ಲಿಸಲಿದ್ದಾರೆ ಎಂದು ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ವರೋನಿಕಾ ಕರ್ನೆಲಿಯೋ ಸುದ್ದಿಗೋಷ್ಠಿ ಯಲ್ಲಿಂದು ತಿಳಿಸಿದ್ದಾರೆ.
ಸಮಾವೇಶದಲ್ಲಿ ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್, ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್, ಎಐಸಿಸಿ ಉಸ್ತುವಾರಿ ವಿಷ್ಣು ನಾಥನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಜಿ.ಎ.ಬಾವಾ, ಸಚಿವ ಪ್ರಮೋದ್ ಮಧ್ವರಾಜ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಉಸ್ತುವಾರಿ ಶೈಲಾ ಕುಟ್ಟಪ್ಪ ಮೊ ಲಾದವರು ಭಾಗವಹಿಸಲಿರುವರು.
ಈ ಸಂದರ್ಭದಲ್ಲಿ ಪ್ರತಿ ಬ್ಲಾಕ್‌ನಿಂದ ಓರ್ವ ಸಾಧಕಿಗೆ ಸನ್ಮಾನ ಮತ್ತು ಜಿಲ್ಲೆಯಿಂದ ಓರ್ವ ಪ್ರತಿಭಾನ್ವಿತ ಮಹಿಳೆಗೆ ಇಂದಿರಾ ಪ್ರಿಯದರ್ಶಿನಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಜಿಲ್ಲಾ ಮಹಿಳಾ ಕಾಂಗ್ರೆಸ್‌ನ ನೂತನ ಜಿಲ್ಲಾ ಅಧ್ಯಕ್ಷೆ ಗೀತಾ ವಾಗ್ಳೆ ಅವರ ಪದಗ್ರಹಣ ಕಾರ್ಯಕ್ರಮವೂ ನಡೆಯಲಿದೆ ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಗೀತಾ ವಾಗ್ಳೆ, ಚಂದ್ರಿಕಾ ಶೆಟ್ಟಿ, ಡಾ.ಸುನೀತಾ ಶೆಟ್ಟಿ, ಜ್ಯೋತಿ ಹೆಬ್ಬಾರ್ ಉಪಸ್ಥಿತರಿದ್ದರು.
‘ಇಂದಿರಾ ಪ್ರಿಯದರ್ಶಿನಿ’ ಮನೆ ಹಸ್ತಾಂತರ
ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಕೋಟ ಬ್ಲಾಕ್‌ನ ವಡ್ಡರ್ಸೆ ಮಧು ವನ ಕಾಲನಿಯ ವಿಧವೆ ಜಲಜ ಪಾಣರ ಅವರಿಗೆ ಸುಮಾರು ನಾಲ್ಕು ಲಕ್ಷ ರೂ. ವೆಚ್ಚದಲ್ಲಿ ನೂತನ ಮನೆಯನ್ನು ನಿರ್ಮಿಸಲಾಗಿದೆ.
‘ಇಂದಿರಾ ಪ್ರಿಯದರ್ಶಿನಿ’ ಮನೆಯನ್ನು ನ.23ರಂದು ಬೆಳಗ್ಗೆ 10:30ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಉದ್ಘಾಟಿಸಿ ಜಲಜ ಪಾಣ ಅವರಿಗೆ ಹಸ್ತಾಂತರಿಸಲಿರುವರು. ಅದೇ ರೀತಿ ಇಂದಿರಾ ಗಾಂಧಿಯ ಶಾಶ್ವತ ನೆನಪಿಗಾಗಿ ಉಡುಪಿಯಲ್ಲಿ ಅವರ ಪುತ್ಥಳಿ ರಚಿಸುವ ಕಾರ್ಯ ನಡೆಯುತ್ತಿದ್ದು, ಇದನ್ನು ಡಿಸೆಂಬರ್ ತಿಂಗಳಲ್ಲಿ ಅನಾವರಣಗೊಳಿಸಲಾಗುವುದು ಎಂದು ವರೋನಿಕಾ ಕರ್ನೆಲಿಯೋ ತಿಳಿಸಿದರು.