ಪ್ರತ್ಯೇಕ ಪ್ರಕರಣ: ಮಹಿಳೆ ಸೇರಿ ಮೂರು ಮಂದಿ ಆತ್ಮಹತ್ಯೆ

Update: 2017-11-23 14:24 GMT

ಬೆಂಗಳೂರು, ನ.23: ಯಲಹಂಕ ಉಪನಗರ ಪ್ರತ್ಯೇಕ ಮೂರು ಸ್ಥಳಗಳಲ್ಲಿ ಮಹಿಳೆ ಸೇರಿ ಮೂರು ಮಂದಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಡೆದಿದೆ.

ಯಲಹಂಕ ಉಪನಗರದ ಮುನೇಶ್ವರ ನಗರದಲ್ಲಿ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದ ದೀಪಿಕಾ(30) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಇತ್ತೀಚಿಗೆ ಗಂಡನನ್ನು ಬಿಟ್ಟು ಒಂಟಿಯಾಗಿ ಜೀವನ ನಡೆಸುತ್ತಿದ್ದರು. ಗಂಡನನ್ನು ಬಿಟ್ಟ ನೋವಿನಿಂದ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.

ಯುವಕ ಆತ್ಮಹತ್ಯೆ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಇಲ್ಲಿನ ಪುಟ್ಟೇನಹಳ್ಳಿಯ ಸುರೇಶ್(30) ಎಂಬ ಯುವಕ ನೇಣಿಗೆ ಶರಣಾಗಿದ್ದಾನೆ. ಇವರು ಇಲ್ಲಿನ ಸ್ಥಳೀಯ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದು, ಕೌಟುಂಬಿಕ ಕಲಹ ಮತ್ತು ಅನಾರೋಗ್ಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

ವೃದ್ಧ ಆತ್ಮಹತ್ಯೆ: ಅನಾರೋಗ್ಯದಿಂದ ಬಳಲುತ್ತಿದ್ದ ಅಂಬಾಭವಾನಿ ನಗರದ ರಾಜು(70) ವಯೋವೃದ್ಧ ಇಂದು ನೇಣಿಗೆ ಶರಣಾಗಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. 

ಈ ಮೂರು ಪ್ರಕರಣಗಳು ದಾಖಲಿಸಿಕೊಂಡಿರುವ ಯಲಹಂಕ ಉಪನಗರ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News