ನ.25 ರಂದು 'ಬಂಗಾರ ಪ್ರಶಸ್ತಿ' ಪ್ರದಾನ ಸಮಾರಂಭ

Update: 2017-11-23 14:48 GMT

ಬೆಂಗಳೂರು, ನ.23: ಎಸ್.ಬಂಗಾರಪ್ಪರ 85ನೆ ಜಯಂತ್ಯುತ್ಸವದ ಅಂಗವಾಗಿ ನ.25 ರಂದು ನಮನ ಹಾಗೂ ವಿವಿಧ ಪ್ರಶಸ್ತಿ ಪ್ರದಾನ ಸಮಾರಂಭವನ್ನು ನಗರದ ಅರಮನೆ ಮೈದಾನದಲ್ಲಿರುವ ವೈಟ್ ಪೆಟಲ್ಸ್‌ನಲ್ಲಿ ಹಮ್ಮಿಕೊಳ್ಳಲಾಗಿದೆ.

ಈ ಬಗ್ಗೆ ವೇದಿಕೆಯ ಗೌರವಾಧ್ಯಕ್ಷ ಡಾ.ಚಂದ್ರಶೇಖರ್ ಕಂಬಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಎಸ್.ಬಂಗಾರಪ್ಪ ಫೌಂಡೇಶನ್ ಹಾಗೂ ಬಂಗಾರಪ್ಪ ವಿಚಾರ ವೇದಿಕೆ ವತಿಯಿಂದ ಕಾರ್ಯಕ್ರಮ ನಡೆಯಲಿದ್ದು, ಅಂದು ಬೆಳಗ್ಗೆ 9.30ಕ್ಕೆ ನುಡಿ ನಮನ, 10ಕ್ಕೆ 'ಜನ ಸಾಮಾನ್ಯರು ಮತ್ತು ತೆರಿಗೆ ನೀತಿ' ವಿಷಯ ಕುರಿತ ಚಿಂತನ ಕಾರ್ಯಕ್ರಮ ನಡೆಯಲಿದೆ. ಹಿರಿಯ ರಂಗಕರ್ಮಿ ಪ್ರಸನ್ನ ಇದನ್ನು ಉದ್ಘಾಟಿಸಲಿದ್ದು, ಶಾಸಕ ಎನ್.ಎ.ಹಾರೀಸ್, ಶಿವನಗೌಡ ನಾಯಕ್, ವಿಧಾನ ಪರಿಷತ್ತು ಸದಸ್ಯ ಕಾಂತರಾಜ್ ಸೇರಿದಂತೆ ಹಲವರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಇದೇ ವೇದಿಕೆಯಲ್ಲಿ ಬೆಳಗ್ಗೆ 11.30 ಕ್ಕೆ ಬಂಗಾರ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ಕಾರ್ಯಕ್ರಮವನ್ನು ಅಂಬೇಡ್ಕರ್‌ರ ಮೊಮ್ಮಗ ಪ್ರಕಾಶ್ ಅಂಬೇಡ್ಕರ್ ಉದ್ಘಾಟಿಸಲಿದ್ದು, ಸಚಿವ ತನ್ವೀರ್‌ಸೇಠ್, ವಿಧಾನ ಪರಿಷತ್ತು ಸದಸ್ಯ ಬಸವನಗೌಡ ಪಾಟೀಲ್ ಯತ್ನಾಳ್, ಮಾಜಿ ಸಚಿವ ಎಚ್.ವಿಶ್ವನಾಥ್, ಪರಿಷತ್ತಿನ ಮಾಜಿ ಸಭಾಧ್ಯಕ್ಷ ವಿ.ಆರ್.ಸುದರ್ಶನ್, ಚಿತ್ರನಟ ಶಿವರಾಜ್‌ಕುಮಾರ್ ಸೇರಿದಂತೆ ಭಾಗವಹಿಸಲಿದ್ದಾರೆ ಎಂದರು.

ಕವಿ ಡಾ.ಚನ್ನವೀರ ಕಣವಿಗೆ ಸಾಹಿತ್ಯ ಬಂಗಾರ, ರಂಗಕರ್ಮಿ ಪ್ರಸನ್ನಗೆ ರಂಗ ಬಂಗಾರ ಮತ್ತು ಖ್ಯಾತ ಜಾನಪದ ಗಾಯಕಿ ಸುಕ್ರಿ ಬೊಮ್ಮಗೌಡಗೆ ಜಾನಪದ ಬಂಗಾರ ಪ್ರಶಸ್ತಿ ನೀಡುತ್ತಿದ್ದು, ಎಲ್ಲ ಪ್ರಶಸ್ತಿಗಳೂ ಒಂದು ಲಕ್ಷ ನಗದು ಮತ್ತು ಪ್ರಶಸ್ತಿ ಫಲಕ ಹೊಂದಿವೆ ಎಂದು ಮಾಹಿತಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News