ಚೆಕ್ ಬುಕ್ ಸೌಲಭ್ಯ ಹಿಂತೆಗೆದುಕೊಳ್ಳುವ ಯಾವ ಪ್ರಸ್ತಾಪವೂ ಇಲ್ಲ: ಕೇಂದ್ರ ಸರಕಾರ ಸ್ಪಷ್ಟನೆ

Update: 2017-11-23 17:12 GMT

ಹೊಸದಿಲ್ಲಿ, ನ.23: ಬ್ಯಾಂಕ್ ಚೆಕ್ ಬುಕ್ ಸೌಲಭ್ಯವನ್ನು ಹಿಂದೆಗೆದುಕೊಳ್ಳುವ ಯಾವ ಪ್ರಸ್ತಾಪವೂ ಇಲ್ಲ ಎಂದು ಕೇಂದ್ರ ಹಣಕಾಸು ಸಚಿವಾಲಯ ಸ್ಪಷ್ಟಪಡಿಸಿದೆ.

ಭವಿಷ್ಯದಲ್ಲಿ ಕೇಂದ್ರ ಸರಕಾರವು ಬ್ಯಾಂಕ್ ಗಳಲ್ಲಿನ ಚೆಕ್ ಬುಕ್ ಸೌಲಭ್ಯವನ್ನು ಹಿಂಪಡೆದುಕೊಳ್ಳುವ ಸಾಧ್ಯತೆಯಿದೆ. ಡಿಜಿಟಲ್ ವ್ಯವಹಾರಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಬಹುದು ಎನ್ನುವ ಮಾಧ್ಯಮ ವರದಿಗಳಿಗೆ ಸಂಬಂಧಿಸಿ ಸಚಿವಾಲಯ ಈ ಸ್ಪಷ್ಟನೆ ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News