ಶಿಕ್ಷಕರು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಲಿ: ಮಂಜುನಾಥ

Update: 2017-11-23 18:38 GMT

ಸೊರಬ, ನ.23: ಶಿಕ್ಷಕರ ಮೇಲೆ ಸಾರ್ವಜನಿಕರು ಹೆಚ್ಚಿನ ನಿರೀಕ್ಷೆಯನ್ನಿಟ್ಟುಕೊಂಡಿದ್ದು, ಜವಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕಿದೆ ಎಂದು ಕ್ಷೇತ್ರ ಶಿಕ್ಷಣಾಕಾರಿ ಕೆ.ಮಂಜುನಾಥ ಸೂಚಿಸಿದ್ದಾರೆ.

ಪಟ್ಟಣದ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಮುಖ್ಯ ಶಿಕ್ಷಕರ ವಾರ್ಷಿಕ ಸಭೆ,, ಶೈಕ್ಷಣಿಕ ಕಾರ್ಯಾಗಾರವನ್ನು ಉದ್ಘಾಟಿಸಿ, ನಿವೃತ್ತ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದ ಅವರು, ಶೈಕ್ಷಣಿಕ ಸಂಸ್ಥೆಯನ್ನು ನಡೆಸುವ ಬಹುದೊಡ್ಡ ಜವಬ್ದಾರಿ ಎಲ್ಲ ಮುಖ್ಯ ಶಿಕ್ಷಕರ ಮೇಲಿದೆ. ಈ ಬಾರಿಯೂ ಉತ್ತಮ ಫಲಿತಾಂಶಕ್ಕಾಗಿ ಶೈಕ್ಷಣಿಕ ಚಟುವಟಿಕೆಗಳನ್ನು ಚುರುಕುಗೊಳಿಸಿ, ಪ್ರತಿಭಾವಂತ ವಿದ್ಯಾರ್ಥಿಗಳ ಜೊತೆಗೆ ಕೊನೆಯ ಸ್ಥಾನದಲ್ಲಿರುವ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ವಿಶೇಷ ತರಗತಿಗಳನ್ನು ನಡೆಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯ ಶಿಕ್ಷಕ ಬಸವರಾಜ ಜಡ್ಡಿಹಳ್ಳಿ ವಹಿಸಿದ್ದರು. ನಿವೃತ್ತ ಶಿಕ್ಷಕರನ್ನು ಹಾಗೂ ಎಸೆಸೆಲ್ಸಿಯಲ್ಲಿ ಅತೀಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕ್ಷೇತ್ರ ಸಂಪನ್ಮೂಲ ಅಧಿಕಾರಿ ಆಂಜನೇಯ, ಖಾಸಗಿ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಹಿರಿಯಣ್ಯಪ್ಪಹಾಗೂ ಶ್ರೀನಿವಾಸ್, ಅರುಣಕುಮಾರ್, ಕಾರ್ಯದರ್ಶಿ ಪಂಚಾಕ್ಷರಯ್ಯ, ಬಸವರಾಜ ಸುಳ್ಳಳ್ಳಿ, ಮನೋಹರ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News