ನ. 25 ರಿಂದ ಜಿಲ್ಲಾ ಮಟ್ಟದ 25ನೆ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ

Update: 2017-11-23 19:12 GMT

ದಾವಣಗೆರೆ, ನ.23: ನ. 25, 26ರಂದು ನಗರದ ಶಾಮನೂರು ಶಿವಶಂಕರಪ್ಪ ಸಮುದಾಯ ಭವನದಲ್ಲಿ ರಾಜ್ಯ ವಿಜ್ಞಾನ ಪರಿಷತ್ ಜಿಲ್ಲಾ ಸಮಿತಿ ಹಾಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆಶ್ರಯದಲ್ಲಿ ಜಿಲ್ಲಾ ಮಟ್ಟದ 25ನೆ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ ಸಮಾರಂಭ ನಡೆಯಲಿದೆ ಎಂದು ಪರಿಷತ್‍ನ ಅಧ್ಯಕ್ಷ ಡಾ.ಬಿ.ಇ. ರಂಗಸ್ವಾಮಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಅವರು, ನ. 25ರ ಬೆಳಗ್ಗೆ 11.30ಕ್ಕೆ ಬೆಳ್ಳಿ ಮಹೋತ್ಸವದ ಉದ್ಘಾಟನೆಯನ್ನು ಶಾಸಕ ಶಾಮನೂರು ಶಿವಶಂಕರಪ್ಪ ನೆರವೇರಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಸ್ಮರಣಾ ಸಂಚಿಕೆ ಬಿಡುಗಡೆಗೊಳಿಸಲಿದ್ದಾರೆ. ಅತಿಥಿಗಳಾಗಿ ರಾಜ್ಯ ವಿಜ್ಞಾನ ಪರಿಷತ್‍ನ ಅಧ್ಯಕ್ಷ ಪ್ರೊ.ಎಸ್.ವಿ. ಸಂಕನೂರು, ಜಿಲ್ಲಾಧಿಕಾರಿ ಡಿ.ಎಸ್. ರಮೇಶ್, ಕೆ.ಬಿ. ಕೊಟ್ರೇಶ್, ಕೆ.ಬಿ. ಕಡ್ಲೆವಾಡ ಮತ್ತಿತರರು ಆಗಮಿಸುವರು ಎಂದು ಹೇಳಿದರು.

ನ. 26ರಂದು ಬೆಳಗ್ಗೆ 10ಕ್ಕೆ ಶ್ರೀಸಿದ್ದಗಂಗಾ ವಿದ್ಯಾಸಂಸ್ಥೆ ಸಭಾಂಗಣದಲ್ಲಿ ಯೋಜನಾ ವರದಿ ಮಂಡನೆ ಉದ್ಘಾಟನೆ ನೆರವೇರಲಿದೆ. ಮೇಯರ್ ಅನಿತಾಬಾಯಿ, ಪಾಲಿಕೆ ಸದಸ್ಯ ಶಿವನಹಳ್ಳಿ ರಮೇಶ್ ಮತ್ತಿತರರು ಭಾಗವಹಿಸುವರು. ಅಂದು ಸಂಜೆ 3.30ಕ್ಕೆ ಸಮಾರೋಪ ಸಮಾರಂಭ ಜರುಗಲಿದ್ದು, ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷ ಬಿ.ಎನ್. ಮಲ್ಲೇಶ್ ಸಮಾರೋಪ ನುಡಿಗಳನ್ನಾಡುವರು. ಅತಿಥಿಗಳಾಗಿ ಲಯನ್ಸ್ ಕ್ಲಬ್ ಅಧ್ಯಕ್ಷ ಮಂಜುನಾಥ್ ಏಕಬೋಟೆ, ವರದಿಗಾರರ ಕೂಟದ ಪ್ರಧಾನ ಕಾರ್ಯದರ್ಶಿ ನಾಗರಾಜ್ ಬಡದಾಳ್ ಮತ್ತಿತರರು ಆಗಮಿಸುವರು ಎಂದು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಎಂ. ಗುರುಸಿದ್ದಸ್ವಾಮಿ, ಎಚ್. ಚಂದ್ರಪ್ಪ, ಫಸೀಹಾ ಸುಲ್ತಾನ ಮತ್ತಿತರರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News