ಥಾಣೆಯಲ್ಲಿ ಕಟ್ಟಡ ಕುಸಿತ: ಓರ್ವ ಸಾವು, 17 ಮಂದಿ ಸಿಲುಕಿರುವ ಸಾಧ್ಯತೆ

Update: 2017-11-24 06:30 GMT

ಮುಂಬೈ, ನ.24: ಥಾಣೆ ಜಿಲ್ಲೆಯ ಭಿವಂಡಿ ಪಟ್ಟಣದಲ್ಲಿ ಹಳೆಯ ಕಟ್ಟಡದ ಒಂದು ಭಾಗ ಕುಸಿದು ಬಿದ್ದಿರುವ ಘಟನೆ ಶುಕ್ರವಾರ ಬೆಳಗ್ಗೆ ಸಂಭವಿಸಿದೆ. ಘಟನೆಯಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಕನಿಷ್ಠ 17 ಮಂದಿ ಅವಶೇಷಗಳಡಿ ಸಿಲುಕಿ ಹಾಕಿಕೊಂಡಿರುವ ಶಂಕೆಯಿದೆ.
ಪ್ರಾಥಮಿಕ ವರದಿಯ ಪ್ರಕಾರ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(ಎನ್‌ಡಿಆರ್‌ಎಫ್) ಘಟನಾ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ. ಎನ್‌ಡಿಆರ್‌ಎಫ್ ತಂಡಗಳ ಕಾರ್ಯಾಚರಣೆಗೆ ಅನುಕೂಲವಾಗಲು ಗ್ರೀನ್ ಕಾರಿಡಾರ್‌ನ್ನು ನಿರ್ಮಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News