ಶ್ರೀಲಂಕಾ ವಿರುದ್ಧದ ಟೆಸ್ಟ್: ಕೊಹ್ಲಿ ದ್ವಿಶತಕದ ಸಾಧನೆ
Update: 2017-11-26 15:52 IST
ನಾಗ್ಪುರ, ನ.26: ಭಾರತದ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ಶ್ರೀಲಂಕಾ ವಿರುದ್ಧದ ಎರಡನೇ ಕ್ರಿಕೆಟ್ ಟೆಸ್ಟ್‌ನಲ್ಲಿ ದ್ವಿಶತಕ ದಾಖಲಿಸಿದ್ದಾರೆ.
ಟೆಸ್ಟ್‌ನ ಮೂರನೆ ದಿನವಾಗಿರುವ ಇಂದು ಕೊಹ್ಲಿ ಅವರು ಮೊದಲ ಇನಿಂಗ್ಸ್‌ನಲ್ಲಿ 259 ಎಸೆತಗಳನ್ನು ಎದುರಿಸಿ 15 ಬೌಂಡರಿ ಮತ್ತು 2 ಸಿಕ್ಸರ್ ನೆರವಿನಲ್ಲಿ ದ್ವಿಶತಕ ದಾಖಲಿಸಿದರು. ಇದರೊಂದಿಗೆ ವಿಂಡೀಸ್ ನ ಲಾರಾ ದಾಖಲೆಯನ್ನು ಸರಿಗಟ್ಟಿದರು. ಲಾರಾ 5 ದ್ವಿಶತಕ ದಾಖಲಿಸಿದ್ದರು.
ಕೊಹ್ಲಿ 213 ರನ್ (267ಎ, 17ಬೌ,2ಸಿ) ಗಳಿಸಿ ಔಟಾದರು. ಇದಕ್ಕೂ ಮೊದಲು ಅವರು 130ಎಸೆತಗಳಲ್ಲಿ 10 ಬೌಂಡರಿಗಳ ಸಹಾಯದಿಂದ ಶತಕ ತಲುಪಿದರು. ಇದು ಅವರ 19ನೇ ಟೆಸ್ಟ್ ಶತಕವಾಗಿತ್ತು.
62ನೇ ಟೆಸ್ಟ್‌ನಲ್ಲಿ ದ್ವಿಶತಕ ದಾಖಲಿಸಿರುವ ಕೊಹ್ಲಿ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಶತಕ ಬಾರಿಸಿದ್ದರು.