ಕಲ್ಲಡ್ಕದಲ್ಲಿ ಸರಣಿ ಅಪಘಾತ: ಮೂರು ಮಂದಿಗೆ ಗಾಯ
Update: 2017-11-26 21:13 IST
ಬಂಟ್ವಾಳ, ನ.26: ಕಲ್ಲಡ್ಕ ಸಮೀಪದ ನರಹರಿ ಪರ್ವತದ ಬಳಿ ಮೂರು ವಾಹನಗಳು ಢಿಕ್ಕಿಯಾಗಿ ರವಿವಾರ ಸರಣಿ ಅಪಘಾತ ಸಂಭವಿಸಿದೆ. ಈ ವಾಹನ ದಲ್ಲಿ ಮೂವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.
ಪುತ್ತೂರು ಕಡೆಯಿಂದ ಬರುತ್ತಿದ್ದ ಕಾರು ಹಾಗೂ ಮಂಗಳೂರು ಕಡೆಯಿಂದ ಬಂದ ಇನ್ನೊಂದು ಕಾರು ಮುಖಾಮುಖಿ ಢಿಕ್ಕಿ ಹೊಡೆದಿದೆ. ಇದೇ ವೇಳೆ ಇದರ ಹಿಂಬದಿ ಬರುತ್ತಿದ್ದ ಮತ್ತೊಂದು ಕಾರಿನ ಚಾಲಕ ತನ್ನ ಕಾರು ಢಿಕ್ಕಿಯಾಗುವುದನ್ನು ತಪ್ಪಿಸಲು ಏಕಾಏಕಿ ಬ್ರೇಕ್ ಹಾಕಿದ್ದು, ಇದರಿಂದ ನಿಯಂತ್ರಣ ತಪ್ಪಿದ ಕಾರು ಎರಡು ಕಾರಿಗೆ ಢಿಕ್ಕಿ ಹೊಡೆದು ಮಗುಚಿಬಿದ್ದಿದೆ.
ಘಟನೆಯಿಂದ ಕೆಲ ಕಾಲ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತ ಗೊಂಡಿತ್ತು. ಸಂಚಾರಿ ಪೊಲೀಸರು ವಾಹನದಟ್ಟಣೆ ನಿಭಾಯಿಸಲು ಹರಸಾಹಸ ಪಟ್ಟರು.
ಈ ಸಂಬಂಧ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.