×
Ad

‘ದೇವರಿಗೆ ಬಿಟ್ಟ ಕಾಗದ’ ಕೃತಿ ಬಿಡುಗಡೆ

Update: 2017-11-26 22:28 IST

ಮಂಗಳೂರು, ನ. 26. ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತು, ಗೋವಿಂದದಾಸ ಕಾಲೇಜು ಸುರತ್ಕಲ್ ಮತ್ತು ರೋಟರಿ ಕ್ಲಬ್ ಸುರತ್ಕಲ್ ಇವುಗಳ ಆಶ್ರಯದಲ್ಲಿ ಗೋವಿಂದದಾಸ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾಹಿತಿ ರಘು ಇಡ್ಕಿದು ರಚಿಸಿದ ‘ದೇವರಿಗೆ ಬಿಟ್ಟ ಕಾಗದ’ ಕೃತಿಯನ್ನು ಜಾನಪದ ವಿದ್ವಾಂಸ ಡಾ. ಚಿನ್ನಪ್ಪಗೌಡ ಬಿಡುಗಡೆಗೊಳಿಸಿದರು.

ಕಾಲೇಜಿನ ಪ್ರಾಂಶುಪಾಲ ಡಾ. ಮುರಳೀಧರ ರಾವ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಾಲೇಜಿನ ಉಪ ಪ್ರಾಂಶುಪಾಲ ಪ್ರೊ. ಪಿ. ಕೃಷ್ಣಮೂರ್ತಿ, ನಿವೃತ ಸಾರಿಗೆ ಅಧಿಕಾರಿ ಮಾಧವ ಯು. ಮತ್ತು ಸುರತ್ಕಲ್ ರೋಟರಿ ಕ್ಲಬ್ ಅಧ್ಯಕ್ಷ ಡಾ. ಹರಿಕೃಷ್ಣ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಕೃತಿಕಾರ ರಘು ಇಡ್ಕಿದು ಮತ್ತು ಪ್ರಕಾಶಕ ನಂದಗೋಕುಲ ಉಪಸ್ಥಿತರಿದ್ದರು. ಅರೆಹೊಳೆ ಸದಾಶಿವ ರಾವ್ ಸ್ವಾಗತಿಸಿದರು. ಶೈಲಜಾ ಪುದುಕೋಳಿ ವಂದಿಸಿದರು. ಮಂಗಳೂರು ತಾಲೂಕು ಚುಸಾಪ ಕಾರ್ಯದರ್ಶಿ ಎನ್. ಸುಬ್ರಾಯ ಭಟ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News