ಮಂಗಳೂರು: ದಕ್ಷಿಣ ಮಹಿಳಾ ಕಾಂಗ್ರೆಸ್‌ನಿಂದ ಇಂದಿರಾ 100-ದೀಪ ನಮನ
ಮಂಗಳೂರು, ನ. 26: ಮಂಗಳೂರು ದಕ್ಷಿಣ ಮಹಿಳಾ ಕಾಂಗ್ರೆಸ್ ಸಮಿತಿಯ ವತಿಯಿಂದ ಇಂದಿರಾ -100 ದಿಪ ನಮನ ಕಾರ್ಯಕ್ರಮ ಜಪ್ಪಿನಲ್ಲಿರುವ ಪ್ರಶಾಂತಿ ನಿಲಯದಲ್ಲಿ ಇತ್ತೀಚೆಗೆ ನಡೆಯಿತು.
ಮೈಸೂರು ವಿಭಾಗದ ಎಐಸಿಸಿ ಉಸ್ತುವಾರಿ ಕಾರ್ಯದರ್ಶಿ ಪಿ.ಸಿ.ವಿಷ್ಣುನಾದನ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ದೇಶದಲ್ಲಿ ಬಡವರ ಕಲ್ಯಾಣಕ್ಕಾಗಿ ಸದಾ ಕ್ರೀಯಾಶೀಲರಾಗಿದ್ದ ಇಂದಿರಾ ಗಾಂಧಿ ಬ್ಯಾಂಕುಗಳ ರಾಷ್ಟ್ರೀಕರಣದಂತಹ ಮಹತ್ವದ ನಿರ್ಧಾರವನ್ನು ತೆಗೆದುಕೊಂಡು ಉಕ್ಕಿನ ಮಹಿಳೆ ಎಂಬ ಖ್ಯಾತಿಗೆ ಪಾತ್ರರಾಗಿದ್ದು , ದೇಶಕ್ಕೆ ಮಾದರಿಯಾಗಿದ್ದರು. ಇಂದಿರಾ ಗಾಂಧಿಯ ಜನ್ಮ ಶತಾಬ್ಧಿಯ ಸಂದರ್ಭದಲ್ಲಿ ಮಹಿಳಾ ಕಾಂಗ್ರೆಸ್ ಹಮ್ಮಿಕೊಂಡಿರುವ ಗ್ರಾಮ ವಾಸ್ತವ್ಯ ಮಹತ್ವದ ಕಾರ್ಯಕ್ರಮವಾಗಿದೆ .ರಾಜಕೀಯ ಕ್ಷೇತ್ರದಲ್ಲಿ ಮಹಿಳೆಯರು ಇನ್ನಷ್ಟು ಸಕ್ರೀಯವಾಗಿ ಭಾಗವಹಿಸಲು ಇನ್ನಷ್ಟು ಪ್ರೇರಣೆ ನೀಡಬೇಕಾಗಿದೆ ಎಂದು ವಿಷ್ಣುನಾದನ್ ತಿಳಿಸಿದ್ದಾರೆ.
ಕಾರ್ಯಕ್ರಮದ ಅಂಗವಾಗಿ ಪ್ರಶಾಂತಿ ನಿಲಯದ ನಿವಾಸಿಗಳಿಗೆ ಮಹಿಳಾ ಕಾಂಗ್ರೆಸ್ ವತಿಯಿಂದ ಹಣ್ಣು ಹಂಪಲು ವಿತರಿಸಲಾಯಿತು.
ಸಮಾರಂಭದಲ್ಲಿ ಕೆ.ಪಿ.ಸಿ.ಸಿ ಕಾರ್ಯದರ್ಶಿ ಪಿ.ವಿ.ಮೋಹನ್, ಕೆ.ಬಿ.ವೆಂಕಟೇಶ್, ಮಂಗಳೂರು ಬ್ಲಾಕ್ ದಕ್ಷಿಣ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಸಲೀಂ,ಕೆಪಿಸಿಸಿ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ಅಪ್ಪಿ,ಜಿಲ್ಲಾ ಕಾಂಗ್ರೆಸ್ ಸದಸ್ಯ ಪ್ರಭಾಕರ ಶ್ರೀಯಾನ್,ಮಾಜಿ ಮೇಯರ್ ಜೆಸಿಂತಾ ವಿಜಯ ಆಲ್ಪ್ರೇಡ್, ಪ್ರಶಾಂತಿ ನಿಲಯದ ಮುಖ್ಯಸ್ಥೆ ಸಿಸ್ಟರ್ ಸಿಲ್ವಿಯಾ, ಕಾರ್ಯದರ್ಶಿ ದುರ್ಗಾಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.
ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮಾಜಿ ಮೇಯರ್ ನಮಿತಾ ಡಿ ರಾವ್ ಸ್ವಾಗತಿಸಿ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸದಾಶಿವ ಅಮೀನ್ ವಂದಿಸಿದರು.