ಜೆಡಿಎಸ್ ಪ್ರಧಾನ ಕಾರ್ಯದರ್ಶಿಯಾಗಿ ಪ್ರಜ್ವಲ್ ರೇವಣ್ಣ

Update: 2017-11-27 13:39 GMT

ಬೆಂಗಳೂರು, ನ. 27: ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆದೇಶದ ಮೇರೆಗೆ ಜಾತ್ಯತೀತ ಜನತಾದಳದ ಪ್ರಧಾನ ಕಾರ್ಯದರ್ಶಿಯನ್ನಾಗಿ ಪ್ರಜ್ವಲ್ ರೇವಣ್ಣ ಅವರನ್ನು ನೇಮಕ ಮಾಡಿ ಪಕ್ಷದ ಮಹಾ ಪ್ರಧಾನಕಾರ್ಯದರ್ಶಿ ಬಿ.ಎಂ.ಫಾರೂಕ್ ಆದೇಶ ಹೊರಡಿಸಿದ್ದಾರೆ.

ತಾವೂ ಈ ಗುರುತರವಾದ ಜವಾಬ್ದಾರಿಯನ್ನು ವಹಿಸಿಕೊಂಡು ಪಕ್ಷ ಹಾಗೂ ಸಿದ್ಧಾಂತಗಳಿಗೆ ಬದ್ಧರಾಗಿ ರಾಜ್ಯದಲ್ಲಿ ಜಾತ್ಯತೀತ ಜನತಾದಳ ಪಕ್ಷವನ್ನು ಪರಿಣಾಮಕಾರಿಯಾಗಿ ಸಂಘಟಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕು ಎಂದು ಸೂಚಿಸಲಾಗಿದೆ.

ಮುಂಬರುವ ವಿಧಾನಸಭೆ ಚುನಾವಣೆಗೆ ಟಿಕೆಟ್ ಆಕಾಂಕ್ಷಿಯಾಗಿರುವ ಪ್ರಜ್ವಲ್ ರೇವಣ್ಣ ಚಿಕ್ಕಮಗಳೂರಿನ ಬೇಲೂರು, ರಾಜರಾಜೇಶ್ವರಿನಗರ, ಮೈಸೂರಿನ ಹುಣಸೂರು ಕ್ಷೇತ್ರಗಳ ಪೈಕಿ ಯಾವುದಾದರೊಂದರಲ್ಲಿ ಸ್ಪರ್ಧಿಸುವ ಆಸಕ್ತಿ ಹೊಂದಿದ್ದು, ಅವಕಾಶ ನೀಡಿದರೆ ಚುನಾವಣೆಗೆ ಸ್ಪರ್ಧಿಸಲು ಉತ್ಸುಕರಾಗಿದ್ದಾರೆ ಎಂದು ಗೊತ್ತಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News