ಶಿರಸಿ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ
Update: 2017-11-27 17:55 IST
ಶಿರಸಿ, ನ.27: ವ್ಯಕ್ತಿಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಭೈರುಂಬೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ.
ಮೃತರನ್ನು ಶಂಭು ಗುರುಪಾದ ಹೆಗಡೆ (77) ಎಂದು ಗುರುತಿಸಲಾಗಿದೆ.
ಶಂಭು ಅವರು ತಮ್ಮ ಮನೆಯ ತೋಟದಲ್ಲಿರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಜೀವನ ಜಿಗುಪ್ಸೆಯೇ ಆತ್ಮಹತ್ಯೆಗೆ ಕಾರಣ ಎಂದು ಹೇಳಲಾಗಿದೆ.
ಈ ಬಗ್ಗೆ ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.