ಬೆದರಿಸಿ ಸುಲಿಗೆ
Update: 2017-11-27 18:22 IST
ಬೆಂಗಳೂರು, ನ.27: ಕೆಲಸ ಮುಗಿಸಿಕೊಂಡು ಸೈಕಲ್‌ನಲ್ಲಿ ಮನೆಗೆ ತೆರಳುತ್ತಿದ್ದ ಅಡುಗೆ ಭಟ್ಟನನ್ನು ಹಿಂಬಾಲಿಸಿದ ಇಬ್ಬರು ಬೆದರಿಸಿ 14 ಸಾವಿರ ನಗದು ಕಸಿದು ಪರಾರಿಯಾಗಿರುವ ಘಟನೆ ಇಲ್ಲಿನ ಮಹದೇವಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಹೊಟೇಲ್‌ವೊಂದರಲ್ಲಿ ಅಡುಗೆ ಕೆಲಸ ಮಾಡುವ ಒರಿಸ್ಸಾ ಮೂಲದ ನದೀಮ್ ಎಂಬವರು ಕೆಲಸ ಮುಗಿಸಿಕೊಂಡು ರಾತ್ರಿ 11:35ರಲ್ಲಿ ಸೈಕಲ್‌ನಲ್ಲಿ ಮನೆಗೆ ತೆರಳುತ್ತಿದ್ದರು. ಈ ವೇಳೆ ಬೈಕ್‌ನಲ್ಲಿ ಬಂದ ಇಬ್ಬರು ದರೋಡೆಕೋರರು ಇವರನ್ನು ಅಡ್ಡಗಟ್ಟಿ ಬೆದರಿಸಿ 14 ಸಾವಿರ ಕಸಿದು ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಈ ಸಂಬಂಧ ಮಹದೇವಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.