×
Ad

ಶ್ರೀಲಂಕಾ ವಿರುದ್ಧ ಏಕದಿನ ಸರಣಿ: ಕೊಹ್ಲಿಗೆ ವಿಶ್ರಾಂತಿ, ರೋಹಿತ್‌ಗೆ ನಾಯಕತ್ವ

Update: 2017-11-27 23:26 IST

ಹೊಸದಿಲ್ಲಿ, ನ.27: ಶ್ರೀಲಂಕಾ ವಿರುದ್ಧ ಡಿ.10 ರಿಂದ ಆರಂಭವಾಗಲಿರುವ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತ ತಂಡವನ್ನು ಸೋಮವಾರ ಪ್ರಕಟಿಸಲಾಗಿದೆ. ಬಿಡುವಿಲ್ಲದ ಕ್ರಿಕೆಟ್ ಆಡುತ್ತಿರುವ ನಾಯಕ ವಿರಾಟ್ ಕೊಹ್ಲಿಗೆ ಏಕದಿನ ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ.

ಟೀಮ್ ಇಂಡಿಯಾ ಆಯ್ಕೆ ಸಮಿತಿಯು ಕೊಹ್ಲಿಯ ಅನುಪಸ್ಥಿತಿಯಲ್ಲಿ ಮುಂಬೈ ದಾಂಡಿಗ ರೋಹಿತ್ ಶರ್ಮರನ್ನು ತಂಡದ ನಾಯಕನನ್ನಾಗಿ ಆಯ್ಕೆ ಮಾಡಿದೆ.

ಕೊಹ್ಲಿ ಐಪಿಎಲ್ ಬಳಿಕ ಬಿಡುವಿಲ್ಲದ ಕ್ರಿಕೆಟ್ ಆಡುತ್ತಿದ್ದಾರೆ. ಇತ್ತೀಚೆಗೆ ಅವರು ಕ್ರಿಕೆಟ್ ವೇಳಾಪಟ್ಟಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ದಕ್ಷಿಣ ಆಫ್ರಿಕ ವಿರುದ್ಧ ಪ್ರವಾಸಕ್ಕಿಂತ ಮೊದಲು ತಂಡಕ್ಕೆ ವಿಶ್ರಾಂತಿಯ ಅಗತ್ಯವಿದೆ ಎಂದು ಅವರು ಹೇಳಿದ್ದರು.

ವೈಯಕ್ತಿಕ ಕಾರಣದಿಂದಾಗಿ ಎರಡನೆ ಟೆಸ್ಟ್‌ನಿಂದ ಹೊರಗುಳಿದಿದ್ದ ಶಿಖರ್ ಧವನ್ ಡಿ.2 ರಿಂದ ಆರಂಭವಾಗಲಿರುವ ಶ್ರೀಲಂಕಾ ವಿರುದ್ಧದ ಮೂರನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಆಡಲಿದ್ದಾರೆ.

ಮೂರನೇ ಟೆಸ್ಟ್‌ಗೆ ಭಾರತ ತಂಡ: ವಿರಾಟ್ ಕೊಹ್ಲಿ(ನಾಯಕ), ಎಂ.ವಿಜಯ್, ಕೆ.ಎಲ್.ರಾಹುಲ್, ಶಿಖರ್ ಧವನ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ(ಉಪ-ನಾಯಕ),ರೋಹಿತ್ ಶರ್ಮ, ವೃದ್ದಿಮಾನ್ ಸಹಾ, ಆರ್.ಅಶ್ವಿನ್, ರವೀಂದ್ರ ಜಡೇಜ, ಕುಲ್‌ದೀಪ್ ಯಾದವ್, ಮುಹಮ್ಮದ್ ಶಮಿ, ಉಮೇಶ್ ಯಾದವ್, ಇಶಾಂತ್ ಶರ್ಮ, ವಿಜಯ್ ಶಂಕರ್.

ಏಕದಿನ ಸರಣಿಗೆ ಭಾರತ ತಂಡ: ರೋಹಿತ್ ಶರ್ಮ(ನಾಯಕ), ಶಿಖರ್ ಧವನ್, ಅಜಿಂಕ್ಯ ರಹಾನೆ, ಶ್ರೇಯಸ್ ಅಯ್ಯರ್,ಮನೀಶ್ ಪಾಂಡೆ, ಕೇದಾರ್ ಜಾಧವ್, ದಿನೇಶ್ ಕಾರ್ತಿಕ್, ಎಂಎಸ್ ಧೋನಿ(ವಿಕೆಟ್‌ಕೀಪರ್),ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಕುಲ್‌ದೀಪ್ ಯಾದವ್, ಯಜುವೇಂದ್ರ ಚಾಹಲ್, ಜಸ್‌ಪ್ರಿತ್ ಬುಮ್ರಾ, ಭುವನೇಶ್ವರ ಕುಮಾರ್, ಸಿದ್ದಾರ್ಥ್ ಕೌಲ್.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News