×
Ad

ಯುವ ಜನತೆಗೆ ಅಭಿವೃದ್ಧಿಪರ ಚಿಂತನೆ ಅಗತ್ಯ: ಹರೀಶ್

Update: 2017-11-27 23:54 IST

ಮಡಿಕೇರಿ, ನ.27: ಯುವ ಸಮೂಹ ನಾಡಿನ ಸಂಸ್ಕೃತಿ, ಕಲೆ, ಆಚಾರ ವಿಚಾರಗಳನ್ನು ಮೈಗೂಡಿಸಿಕೊಳ್ಳುವುದರೊಂದಿಗೆ ಅಭಿವೃದ್ಧಿಪರ ಚಿಂತನೆಯ ಗುರಿಯನ್ನು ಅಳವಡಿಸಿಕೊಳ್ಳಬೇಕೆಂದು ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್ ಕರೆ ನೀಡಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನೆಹರೂ ಯುವ ಕೇಂದ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಯುವ ಒಕ್ಕೂಟ, ಮೂರು ತಾಲೂಕು ಯುವ ಒಕ್ಕೂಟ ಮತ್ತು ಕಾವೇರಿ ಕಲಾವೃಂದ ಇವರ ಸಂಯುಕ್ತಾಶ್ರಯದಲ್ಲಿ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಸೋಮವಾರ ನಡೆದ ಕೊಡಗು ಜಿಲ್ಲಾ ಮಟ್ಟದ ಯುವಜನೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ರಾಷ್ಟ್ರದಲ್ಲಿ ಯುವಶಕ್ತಿ ದೊಡ್ಡ ಸಂಖ್ಯೆಯಲ್ಲಿದೆ. ಯುವ ಜನರು ವಿದ್ಯಾಭ್ಯಾಸದ ಜತೆಗೆ ಸಾಹಿತ್ಯ, ಕ್ರೀಡೆ, ಕಲೆ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಪ್ರತಿಭೆ ಪ್ರದರ್ಶನ ಮಾಡಬೇಕು. ತಮಗೆ ಆಸಕ್ತಿ ಇರುವ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಸಮಾಜದಲ್ಲಿ ಒಳ್ಳೆಯ ಹೆಸರು ಪಡೆಯುವಂತಾಗಬೇಕು ಎಂದು ಸಲಹೆ ನೀಡಿದರು.

ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್ ಮಾತನಾಡಿ, ಯುವ ಜನರಿಗಾಗಿ ಸರಕಾರದಿಂದ ಹಲವು ಸೌಲಭ್ಯಗಳು ಲಭ್ಯವಿದ್ದು, ಅವುಗಳನ್ನು ಸರಿಯಾದ ರೀತಿಯಲ್ಲಿ ಸದುಪಯೋಗಪಡಿಸಿಕೊಂಡು ಉತ್ತಮ ಜೀವನ ಕಟ್ಟಿಕೊಳ್ಳುವಂತಾಗಬೇಕು ಎಂದರು.

ಈ ವೇಳೆ ನೆಹರೂ ಯುವ ಕೇಂದ್ರದ ಯುವ ಸಮನ್ವಯಾಧಿಕಾರಿ ಅನಂತಪ್ಪ ಮಾತನಾಡಿದರು.

ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಜಯಲಕ್ಷ್ಮೀ ಬಾಯಿ, ಕೊಡಗು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಎಂ.ಬಿ. ಜೋಯಪ್ಪ ತಾಲೂಕು ಯುವ ಒಕ್ಕೂಟದ ಅಧ್ಯಕ್ಷ ನವೀನ್ ದೇರಳ, ಶೋಭ ರಾಜ್, ಸುಕುಮಾರ್ ಮತ್ತಿತರರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News