ಗಬ್ಬರ್‌ಸಿಂಗ್ ಟ್ಯಾಕ್ಸ್(ಜಿಎಸ್‌ಟಿ) ವಿರುದ್ಧ ಶೋಲೆ !

Update: 2017-11-28 17:53 GMT

 ಸೂರತ್, ನ.28: ಹಿಂದಿ ಸಿನೆಮ ‘ಶೋಲೆ’ಯ ಗಬ್ಬರ್‌ಸಿಂಗ್ ರೀತಿ ಬಟ್ಟೆ ಧರಿಸಿಕೊಂಡು ಕಾಂಗ್ರೆಸ್ ಕಾರ್ಯಕರ್ತರು ಜಿಎಸ್‌ಟಿ(ಕಾಂಗ್ರೆಸ್ ಪಕ್ಷ ಇದನ್ನು ಗಬ್ಬರ್ ಸಿಂಗ್ ಟ್ಯಾಕ್ಸ್ ಎಂದು ಟೀಕಿಸಿದೆ)ಯನ್ನು ವಿರೋಧಿಸಿ ಸೂರತ್‌ನಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು ಕೈಯಲ್ಲಿ ಗನ್ ಹಾಗೂ ರೈಫಲ್ಸ್‌ಗಳನ್ನು ಹಿಡಿದು ಜಿಎಸ್‌ಟಿ ವಿರುದ್ಧ ಘೋಷಣೆ ಕೂಗಿದರು.

 ಯಾವುದೇ ಪೂರ್ವಾನುಮತಿ ಪಡೆಯದೆ ಪ್ರತಿಭಟನೆ ನಡೆಸಿದ್ದಾರೆ ಹಾಗೂ ಕೈಯಲ್ಲಿ ಏರ್‌ಗನ್ ಹಿಡಿದಿದ್ದರು. ಈ ಬಗ್ಗೆ ಮೇಲಧಿಕಾರಿಗಳಿಗೆ ಮಾಹಿತಿ ನೀಡಲಾಗಿದ್ದು ಒಂದು ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಜಿಎಸ್‌ಟಿಯನ್ನು ‘ಗಬ್ಬರ್ ಸಿಂಗ್ ಟ್ಯಾಕ್ಸ್’ ಎಂದು ಲೇವಡಿ ಮಾಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News