×
Ad

ಬಂಟ್ವಾಳ : ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಶಿಬಿರ

Update: 2017-11-29 18:51 IST

ಬಂಟ್ವಾಳ,ನ.29: ಸಿದ್ಧಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಆಂತರಿಕ ಗುಣಮಟ್ಟ ಭರವಸೆ ಕೋಶ ಮತ್ತು ಉದ್ಯೋಗ ಭರವಸೆ ಕೋಶದ ವತಿಯಿಂದ 'ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಶಿಬಿರ' ನಡೆಯಿತು. 

ತಾಲೂಕು ಪಂಚಾಯತ್ ಸದಸ್ಯ ಪ್ರಭಾಕರ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು  ಪಠ್ಯದ ಜೊತೆಗೆ ಪಠ್ಯೇತರವಾಗಿ ಪರಿಣತಿಯನ್ನು ಪಡೆಯಬೇಕು ಎಂದರು.

ಕಾಲೇಜಿನ ಪ್ರಾಂಶುಪಾಲ ಪ್ರೊ. ಸತ್ಯನಾರಾಯಣ ಭಟ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಿಕ್ಷಣ ವಿದ್ಯಾರ್ಥಿಗಳನ್ನು ಸ್ವಾವಲಂಬಿಗಳನ್ನಾಗಿಸಬೇಕು, ಇಂದಿನ ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ, ಶಿಕ್ಷಣ ಉತ್ತಮ ಮೌಲ್ಯಗಳನ್ನು ವಿದ್ಯಾರ್ಥಿಗಳಿಗೆ ನೀಡುವ ಜೊತೆಗೆ ಉದ್ಯೋಗಕ್ಕೆ ದಾರಿದೀಪವಾಗಬೇಕು. ಈ ನಿಟ್ಟಿನಲ್ಲಿ ಕಾಲೇಜಿನ ಭೋಧಕ ವರ್ಗ ಕಟಿಬದ್ದವಾಗಿದೆ ಎಂದರು.

ಶೃಂಗೇರಿ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಡಾ. ಮಂದಾರ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ, , ವಿದ್ಯಾರ್ಥಿಗಳಿಗೆ ಪರೀಕ್ಷಾ ಸಿದ್ಧತೆಯ ಬಗ್ಗೆ ತರಬೇತಿ ನೀಡಿದರು.

ಕಾಲೇಜಿನ ಇಂಗ್ಲಿಷ್ ಭಾಷಾ ಸಹಾಯಕ ಪ್ರಾಧ್ಯಾಪಕರಾದ ವಿನಯ್ ಎಂ. ಎಸ್ ಉಪಸ್ಥಿತರಿದರು. ವಾಣಿಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕ ಪಾವನಿ ಪಿ. ಸ್ವಾಗತಿಸಿ, ವಾಣಿಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕ ಹನುಮಂತಯ್ಯ ಜಿ.ಎಚ್ ವಂದಿಸಿ, ಇತಿಹಾಸ ಸಹಾಯಕ ಪ್ರಾಧ್ಯಾಪಕ ಡಾ. ಸುಂದ್ರೇಶ್ ಎನ್ ನಿರ್ವಹಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News