×
Ad

ವರದಕ್ಷಿಣೆ ಪ್ರಕರಣಗಳಲ್ಲಿ ಗೈಡ್‌ಲೈನ್ಸ್ ಅಗತ್ಯವಿಲ್ಲ: ಸರ್ವೋಚ್ಛ ನ್ಯಾಯಾಲಯ

Update: 2017-11-29 18:59 IST

 ಹೊಸದಿಲ್ಲಿ, ನ.29: ವರದಕ್ಷಿಣೆ ಕಿರುಕುಳ ಪ್ರಕರಣಗಳನ್ನು ಯಾವ ರೀತಿ ತನಿಖೆ ನಡೆಸಬೇಕು ಎಂಬುದನ್ನು ಕುರಿತು ಮಾರ್ಗಸೂಚಿಗಳನ್ನು ರಚಿಸಲು ಸಾಧ್ಯವಿಲ್ಲ ಯಾಕೆಂದರೆ ಅದು ನೀಡಲಾಗಿರುವ ಅವಕಾಶಗಳನ್ನು ಉಲ್ಲಂಘಿಸಿದಂತಾಗುತ್ತದೆ ಎಂದು ಸರ್ವೋಚ್ಛ ನ್ಯಾಯಾಲಯ ಬುಧವಾರ ತಿಳಿಸಿದೆ. ವರದಕ್ಷಿಣೆ ಕಿರುಕುಳ ಪ್ರಕರಣಗಳಲ್ಲಿ ಪೊಲೀಸರು ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ಆ ಪ್ರಕರಣವನ್ನು ಪರಿಶೀಲಿಸುವುದಕ್ಕಾಗಿ ಸಮಿತಿಯೊಂದನ್ನು ರಚಿಸಲು ನ್ಯಾಯಾಲಯದ ದ್ವಿಸದಸ್ಯ ಪೀಠ ನೀಡಿದ್ದ ನಿರ್ದೇಶನಕ್ಕೆ ತಡೆ ಕೋರಿ ಹಾಕಲಾದ ಅರ್ಜಿಯ ವಿಚಾರಣೆ ನಡೆಸುತ್ತಿದ್ದ ಮುಖ್ಯ ನ್ಯಾಯಾಧೀಶ ದೀಪಕ್ ಮಿಶ್ರಾ, ನ್ಯಾಯಾಧೀಶ ಎಎಂ ಕಾನ್‌ವಿಲ್ಕರ್ ಮತ್ತು ನ್ಯಾಯಾಧೀಶ ಡಿವೈ ಚಂದ್ರಚೂಡ್ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಈ ಹೇಳಿಕೆ ನೀಡಿದೆ.

ನ್ಯಾಯಾಧೀಶ ಎಕೆ ಗೋಯಲ್ ನೇತೃತ್ವದ ದಿಸದಸ್ಯ ಪೀಠ ವರದಕ್ಷಿಣೆ ಕಿರುಕುಳ ಪ್ರಕರಣಗಳನ್ನು ಪರಿಶೀಲಿಸಲು ಸಮಿತಿಯನ್ನು ರಚಿಸುವ ಆದೇಶ ನೀಡಿತ್ತು. ನ್ಯಾಯಾಲಯ ಸಲಹೆಗಾರರಾದ ವಿ ಶೇಖರ್ ಮತ್ತು ಇಂದು ಮಲ್ಹೋತ್ರಾ ನ್ಯಾಯಾಲಯ ಪೀಠದ ಈ ಆದೇಶವನ್ನು ತಡೆಹಿಡಿಯುವಂತೆ ಮನವಿ ಮಾಡಿದ್ದರು. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 498ಎ ಅಡಿ ವರದಕ್ಷಿಣೆ ಕಿರುಕುಳ ಪ್ರಕರಣಗಳಲ್ಲಿ ಪೊಲೀಸರು ಹೇಗೆ ಮುಂದುವರಿಯಬೇಕು ಎಂಬುದರ ಕುರಿತು ಮಾರ್ಗಸೂಚಿಯನ್ನು ರಚಿಸಲಾಗಿತ್ತು. ಆದರೆ ಇದನ್ನು ತಳ್ಳಿಹಾಕಿರುವ ನ್ಯಾಯಾಲಯದ ತ್ರಿಸದಸ್ಯ ಪೀಠ ಸೆಕ್ಷನ್ 498ಎ ಅಡಿ ವರದಕ್ಷಿಣೆ ಕಿರುಕುಳ ಪ್ರಕರಣಗಳನ್ನು ನಿಯಿಸಲು ಮಾರ್ಗಸೂಚಿಯ ಅಗತ್ಯವಿಲ್ಲ ಎಂದು ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News