ಉಪ್ಪಳಿಗೆ ಸರಕಾರಿ ಪ್ರೌಢ ಶಾಲೆಯಲ್ಲಿ "ಉತ್ತುಂಗ" ಸಭಾಭವನದ ಉದ್ಘಾಟನೆ
ಪುತ್ತೂರು,ನ.29: ಸರ್ಕಾರಿ ಶಾಲೆಗಳಲ್ಲಿ ಉತ್ತಮ ಸೌಲಭ್ಯಗಳು ಹಾಗೂ ವ್ಯವಸ್ಥೆಗಳಿದ್ದು ಮಕ್ಕಳ ಸಂಖ್ಯೆ ಕುಂಟಿತಗೊಳ್ಳುತ್ತಿದೆ. ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವಲ್ಲಿ ಶಿಕ್ಷಕರು ಪೂರ್ಣ ಮನಸ್ಸಿನಿಂದ ಪ್ರಯತ್ನ ನಡೆಸಬೇಕು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.
ಅವರು ಬುಧವಾರ ಪುತ್ತೂರು ತಾಲೂಕಿನ ಉಪ್ಪಳಿಗೆ ಸರಕಾರಿ ಪ್ರೌಢ ಶಾಲೆಯಲ್ಲಿ ನೂತನವಾಗಿ ನಿರ್ಮಿಸಿದ `ಉತ್ತುಂಗ' ಸಭಾಭವನದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ಉಪ್ಪಳಿಗೆ ಸರಕಾರಿ ಪ್ರೌಢ ಶಾಲೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಮೂರನೇ ಸತತ ಮೂರನೇ ಬಾರಿ ಶೇ. 100 ಪಲಿತಾಂಶ ಪಡೆದಿದೆ ಇದಕ್ಕೆ ಶಿಕ್ಷಕರೇ ಕಾರಣರಾಗಿದ್ದಾರೆ. ಮಕ್ಕಳಿಗೆ ಉತ್ತಮ ರೀತಿಯಲ್ಲಿ ಶಿಕ್ಷಣವನ್ನು ನೀಡಿದರೆ ಮಕ್ಕಳು ಉತ್ತಮ ಪಲಿತಾಂಶವನ್ನು ತಂದುಕೊಡುತ್ತಾರೆ ಎಂಬುದಕ್ಕೆ ಇದೊಂದು ಉತ್ತಮ ಉದಾಹರಣೆಯಗಿದೆ. ಶಾಲೆಗಳ ಅಭಿವೃದ್ದಿಗೆ ಊರಿನ ಜನರ ಸಹಕಾರ ಅತೀ ಅಗತ್ಯವಾಗಿದೆ ಎಲ್ಲವನ್ನೂ ಸರಕಾರ ಮಾಡಲು ಸಾಧ್ಯವಿಲ್ಲ.
ಶಿಕ್ಷಕರ ನೇಮಕಾತಿ, ಪೀಠೋಪಕರಣ ಮತ್ತು ಕಟ್ಟಡವನ್ನು ಸರಕಾರ ನಿರ್ಮಿಸಿ ಕೊಡುವುದು ಕಡ್ಡಾಯ ಅದೇ ರೀತಿಯಾಗಿ ಶಾಲೆಯಲ್ಲಿ ಉತ್ತಮ ವಾತಾವರಣ ಮೂಡುವಂತೆ ಗ್ರಾಮಸ್ಥರು ಮತ್ತು ಶಿಕ್ಷಕರು ಒಂದಾಗಿ ಕೆಲಸ ಮಾಡಬೇಕು.ಖಾಸಗಿ ಶಾಲೆಯಲ್ಲಿ ಕಲಿತರೆ ಮಾತ್ರ ಮಕ್ಕಳು ಉನ್ನತ ಸ್ಥಾನಕ್ಕೆ ಬರುತ್ತಾರೆ ಎಂಬುದು ತಪ್ಪು ಈ ದೇಶದಲ್ಲಿ ಮಹಾನ್ ವ್ಯಕ್ತಿಗಳಾದವರು ಸರಕಾರಿ ಶಾಲೆಯಲ್ಲೇ ಕಲಿತವರು ಪ್ರಧಾನಿ ನರೇಂದ್ರ ಮೋದಿವಯವರು ಸರಕಾರಿ ಶಾಲೆಯ ವಿದ್ಯಾರ್ಥಿ ಎಂದು ಹೇಳಿದರು. ಉಪ್ಪಳಿಗೆ ಸರಕಾರಿ ಶಾಲೆಗೆ ಅಗತ್ಯವಾಗಿ ಬೇಕಾದ ಕಾಮಗಾರಿಗೆ ಅನುದಾನವನ್ನು ನೀಡುವುದಾಗಿ ವರು ಈ ಸಂದರ್ಭದಲ್ಲಿ ಭರವಸೆ ನೀಡಿದರು.
ಶಾಸಕಿ ಶಕುಂತಳಾ ಶೆಟ್ಟಿ ನೂತನ ಸಭಾಭವನ ಲೋಕಾರ್ಪಣೆ ಮಾಡಿ ಶುಭ ಹಾರೈಸಿದರು. ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಸಭಾ ಕಾರ್ಯಕ್ರಮ ಉದ್ಘಾಟಿಸಿದರು. ತಾಪಂ ಅಧ್ಯಕ್ಷೆ ಭವಾನಿ ಚಿದಾನಂದ ಅಧ್ಯಕ್ಷತೆ ವಹಿಸಿದ್ದರು.ಶಾಲಾ ಕಟ್ಟಡ ನಿರ್ಮಾಣಕ್ಕೆ ಸಹಕರಿಸಿದ ದಾನಿಗಳಿಗೆ ಸನ್ಮಾನ ಮಾಡಲಾಯಿತು.
ತಾಪಂ ಸದಸ್ಯೆ ಮೀನಾಕ್ಷಿ ಮಂಜುನಾಥ್, ಬೆಟ್ಟಂಪಾಡಿ ಗ್ರಾಪಂ ಅಧ್ಯಕ್ಷೆ ಉಮಾವತಿ ಸುಬ್ಬಪ್ಪ ಮಣಿಯಾಣಿ, ಉಪಾಧ್ಯಕ್ಷೆ ಭವಾನಿ ಗಣೇಶ್ ನಾಯ್ಕ, ಕ್ಷೇತ್ರ ಶಿಕ್ಷಣಾಕಾರಿ ಸುಕ್ನಯ, ಶ್ರೀ ಕ್ಷೇತ್ರ ಧರ್ಮಸ್ಥಳ ಸಂಪೂರ್ಣ ಸುರಕ್ಷಾ ಅನುಷ್ಠಾಣಾಕಾರಿ ಗಣೇಶ್ ಭಟ್, ಎಂಆರ್‍ಪಿಎಲ್ ನ ಸೀತಾರಾಮ ರೈ ಕೈಕಾರ, ನ್ಯಾಯವಾದಿ ಬಿಆರ್ ಶ್ರೀನಿವಾಸ ಗೌಡ, ಉದ್ಯಮಿ ಯತೀಶ್ ರೈ ಚೆಲ್ಯಡ್ಕ, ಪ್ರಗತಿಪರ ಕೃಷಿಕ ಸುಧಾಮಾ ಕಕ್ಕಾಜೆ ಸುಳ್ಯ, ದೇವಪ್ಪ ಗೌಡ ರಂಗಯ್ಯನ ಕಟ್ಟೆ, ಗ್ರಾಪಂ ಸದಸ್ಯರಾದ ಪ್ರಕಾಶ್ ರೈ ಬೈಲಾಡಿ, ಪುಷ್ಪಾವತಿ, ಮಹಮ್ಮದ್ ಹಾಜಿ ಪೇರಲ್ತಡ್ಕ, ಮಹಮ್ಮದ್ ಹಾಜಿ ಕುಕ್ಕುವಳ್ಳಿ, ಬ್ರೈಟ್ ವೇ ನಿರ್ದೇಶಕ ಮನಮೋಹನ್ ರೈ ಚೆಲ್ಯಡ್ಕ, ಡಿಸಿಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರಐ ಬಾಲ್ಯೊಟ್ಟು, ತಾಪಂ ಸದಸ್ಯ ರಾಧಾಕೃಷ್ಣ ಬೋರ್ಕರ್, ದೈಹಿಕ ಶಿಕ್ಷಣ ಪರಿವೀಕ್ಷಕ ಸುಂದರ ಗೌಡ, ಮಹಮ್ಮದ್ ಬಡಗನ್ನೂರು, ನ್ಯಾಯವಾದಿ ಶಂಭುಭಟ್ ಬೆಟ್ಟಂಪಾಡಿ, ಅಮ್ಮಣ್ಣ ರೈ ಪಾಪೆಮಜಲು ಉಪಸ್ಥಿತರಿದ್ದರು.
ಶಾಲಾಅಭಿವೃದ್ದಿ ಸಮಿತಿ ಉಪಾಧ್ಯಕ್ಷರಾದ ಕೃಷ್ಣಪ್ರಸಾದ್ ಆಳ್ವ ರವರು ಪ್ರಸ್ತಾವಿಕವಾಗಿ ಮಾತನಾಡಿದರು. ಮುಖ್ಯ ಶಿಕ್ಷಕ ನಾರಾಯಣ ಕೆ ಸ್ವಾಗತಿಸಿದರು. ದೈಹಿಕ ಶಿಕ್ಷ ರಾಮಕೃಷ್ಣ ಪಡುಮಲೆ ವಂದಿಸಿದರು. ಸಹ ಶಿಕ್ಷಕಿ ಗೀತಾ ಕಾರ್ಯಕ್ರಮ ನಿರೂಪಿಸಿದರು.