ಟೆಸ್ಟ್ ಕ್ರಿಕೆಟ್‌ಗೆ ವಾಪಸಾಗಲು ಡಿ ವಿಲಿಯರ್ಸ್ ತಯಾರಿ

Update: 2017-11-29 18:45 GMT

ಕೇಪ್‌ಟೌನ್, ನ.29: ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಎಬಿ ಡಿ ವಿಲಿಯರ್ಸ್ ಟೆಸ್ಟ್ ಕ್ರಿಕೆಟ್‌ಗೆ ವಾಪಸಾಗಲು ತಯಾರಿ ನಡೆಸುತ್ತಿದ್ದಾರೆ.

ಝಿಂಬಾಬ್ವೆ ವಿರುದ್ಧದ ನಾಲ್ಕು ದಿನಗಳ ಹಗಲು-ರಾತ್ರಿ ಟೆಸ್ಟ್‌ನಲ್ಲಿ ಆಡುವ ಉದ್ದೇಶಕ್ಕಾಗಿ ಮೂರು ದಿನಗಳ ಅಭ್ಯಾಸ ಪಂದ್ಯದಲ್ಲಿ ಆಡಲಿದ್ದಾರೆ.

ಎಬಿಡಿ ವಿಲಿಯರ್ಸ್ ಡಿಸೆಂಬರ್ 2016ರಲ್ಲಿ ಗಾಯಗೊಂಡ ಕಾರಣದಿಂದಾಗಿ ಟೆಸ್ಟ್ ಕ್ರಿಕೆಟ್ ತಂಡದ ನಾಯಕತ್ವ ತ್ಯಜಿಸಿದ್ದರು. ಆಬಳಿಕ ಅವರು ಟೆಸ್ಟ್ ಕ್ರಿಕೆಟ್‌ನಿಂದ ದೂರವಾಗಿದ್ದರು.

33ರ ಹರೆಯದ ಎಬಿಡಿ ಅವರು ಪ್ರಸ್ತುತ ರಾಮ್ ಸ್ಲಾಮ್ ಟ್ವೆಂಟಿ-20 ಟೂರ್ನಮೆಂಟ್‌ನಲ್ಲಿ ಆಡುತ್ತಿದ್ದಾರೆ.

ಎಬಿಡಿ ಮುಂದಿನ ವರ್ಷ ಟೀಮ್ ಇಂಡಿಯಾ ವಿರುದ್ಧ ನಡೆಯಲಿರುವ ಟೆಸ್ಟ್ ಸರಣಿಯಲ್ಲಿ ಆಡುವ ಯೋಜನೆಯಲ್ಲಿದ್ದಾರೆ. ಇದಕ್ಕಾಗಿ ಝಿಂಬಾಬ್ವೆ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಅಭ್ಯಾಸ ನಡೆಸಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News