ಉಡುಪಿ: 64 ಕಡೆ ಮೀಲಾದುನ್ನಬಿ ಮೆರವಣಿಗೆ: ಬಿಗಿ ಭದ್ರತೆ

Update: 2017-11-30 08:48 GMT

ಉಡುಪಿ, ನ.30: ಉಡುಪಿ ಜಿಲ್ಲಾದ್ಯಂತ ಡಿ.1ರಿಂದ 17ರವರೆಗೆ 64 ಕಡೆಗಳಲ್ಲಿ ಮೀಲಾದುನ್ನಬಿ ಮೆರವಣಿಗೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪ್ರಾರ್ಥನಾ ಮಂದಿರಗಳಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಸಂಜೀವ ಎಂ. ಪಾಟೀಲ್ ತಿಳಿಸಿದ್ದಾರೆ.

ಮೆರವಣಿಗೆಯಲ್ಲಿ ಒಂದು ಸಶಸ್ತ್ರ ಮೀಸಲು ಪಡೆಯನ್ನು ನಿಯೋಜಿಸಲಾ ಗುವುದು ಮತ್ತು ಸ್ಥಳೀಯ ಪೊಲೀಸ್ ಠಾಣಾ ಉಪನಿರೀಕ್ಷಕರ ನೇತೃತ್ವದಲ್ಲಿ ಭದ್ರತೆ ಒದಗಿಸಲಾಗುವುದು. ಮೀಲಾದುನ್ನಬಿ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಪೊಲೀಸ್ ಠಾಣೆಗಳಲ್ಲಿ ಶಾಂತಿ ಸಭೆಗಳನ್ನು ನಡೆಸಲಾಗಿದ್ದು, ಕುಂದಾಪುರ ಹಾಗೂ ಗಂಗೊಳ್ಳಿಯಲ್ಲಿ ಖುದ್ದು ನಾನೇ ತೆರಳಿ ಸಭೆ ನಡೆಸಿದ್ದೇನೆ ಎಂದು ಎಸ್ಪಿ ಇಂದು ನಡೆದ ಫೋನ್ ಇನ್ ಕಾರ್ಯಕ್ರಮದ ಸಂದರ್ಭದಲ್ಲಿ ಮಾಧ್ಯಮದವರಿಗೆ ಮಾಹಿತಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News