×
Ad

ಡಿ.1ರಂದು ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಸಭೆ: ದೇಶಪಾಂಡೆ

Update: 2017-11-30 19:27 IST

ಬೆಂಗಳೂರು, ನ. 30: ಉದ್ಯಾನನಗರಿ ಬೆಂಗಳೂರಿನಲ್ಲಿ ವಿದ್ಯುತ್ ಚಾಲಿತ, ಪರಿಸರ ಸ್ನೇಹಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸುವ ಸಂಬಂಧ ಡಿ.1ರಂದು ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಸಲಾಗುವುದು ಎಂದು ಕೈಗಾರಿಕಾ ಸಚಿವ ದೇಶಪಾಂಡೆ ತಿಳಿಸಿದ್ದಾರೆ.

ಗುರುವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದಲ್ಲಿ ವಾಯು ಮಾಲಿನ್ಯ ತಡೆಗಟ್ಟುವ ದೃಷ್ಟಿಯಿಂದ ರಾಜ್ಯ ಸರಕಾರ ಪರಿಸರ ಸ್ನೇಹಿ ವಿದ್ಯುತ್ ಚಾಲಿತ ವಾಹನಗಳ ಸಂಚಾರಕ್ಕೆ ಸಂಬಂಧಿಸಿದಂತೆ ನೀತಿಯೊಂದನ್ನು ಪ್ರಕಟಿಸಿದೆ. ವಿದ್ಯುತ್ ಚಾಲಿತ ವಾಹನಗಳ ಸಂಚಾರಕ್ಕೆ ಕ್ರಿಯಾ ಯೋಜನೆ ರೂಪಿಸಲು ಚರ್ಚಿಸಲಾಗುವುದು ಎಂದರು.

ಶೃಂಗಸಭೆ ಯಶಸ್ವಿ: ಇತ್ತೀಚೆಗೆ ರಾಜ್ಯದಲ್ಲಿ ನಡೆದ ಹೂಡಿಕೆದಾರರ ಶೃಂಗಸಭೆ ಸಫಲವಾಗಿದ್ದು, 20,499 ಕೋಟಿ ರೂ. ಹೂಡಿಕೆಗೆ ಅನುಮೋದನೆ ನೀಡಲಾಗಿದೆ. ಈ ಹೂಡಿಕೆ ಒಪ್ಪಂದದಿಂದ 86,750 ಉದ್ಯೋಗಾವಕಾಶ ಸೃಷ್ಟಿಯಾಗಲಿವೆ ಎಂದು ವಿವರಿಸಿದರು.

ಶೃಂಗಸಭೆಯಲ್ಲಿ 700ಕ್ಕೂ ಹೆಚ್ಚು ಎಂಎಸ್‌ಎಂಇ ಹಾಗೂ 300 ಓಎಂಇ ಕಂಪೆನಿಗಳು ಪಾಲ್ಗೊಂಡಿದ್ದು, ಸಾವಿರಕ್ಕೂ ಹೆಚ್ಚು ಮಳಿಗೆಗಳಿದ್ದವು. ಇದರ ಜೊತೆಗೆ 2500ಕ್ಕೂ ಹೆಚ್ಚು ವ್ಯವಹಾರ ಅಭಿವೃದ್ಧಿ ಸಭೆಗಳು ನಡೆದವು ಎಂದ ಅವರು, ಸಭೆಯಲ್ಲಿ ರಾಜ್ಯದ ಉದ್ಯಮಿಗಳಿಗೆ ಸರ್.ಎಂ.ವಿಶ್ವೇಶ್ವರಯ್ಯ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News