×
Ad

ಉತ್ತರ ಪ್ರದೇಶ: ಪತ್ರಕರ್ತನನ್ನು ಗುಂಡಿಕ್ಕಿ ಕೊಲೆಗೈದ ದುಷ್ಕರ್ಮಿಗಳು

Update: 2017-11-30 20:55 IST

ಕಾನ್ಪುರ, ನ.30: ರಾಷ್ಟ್ರೀಯ ಹಿಂದಿ ದೈನಿಕವೊಂದರ ಪತ್ರಕರ್ತ ನವೀನ್ ಗುಪ್ತಾ (38) ಎಂಬವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆಗೈದ ಘಟನೆ ಕಾನ್ಪುರದ ಬಿಲ್ ಹೌರ್ ನಲ್ಲಿ ನಡೆದಿದೆ.

ಘಟನೆಗೆ ಸಂಬಂಧಿಸಿ ಅಪರಿಚಿತರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಬಿಲ್ ಹೌರ್ ನಗರ್ ಪಲ್ಲಿಕಾದ ಸಮೀಪವಿರುವ ಮಾರುಕಟ್ಟೆಯಲ್ಲಿ ಈ ಘಟನೆ ಸಂಭವಿಸಿದೆ. ಅಂಗಡಿಯೊಂದರಲ್ಲಿ ನವೀನ್ ಕುಳಿತಿದ್ದ ಸಂದರ್ಭ ಅಲ್ಲಿಗೆ ಬೈಕ್ ನಲ್ಲಿ ಆಗಮಿಸಿದ ಮೂವರು ದುಷ್ಕರ್ಮಿಗಳು ನವೀನ್ ರ ಮೇಲೆ ಗುಂಡಿನ ಮಳೆಗರೆದಿದ್ದಾರೆ ಎಂದು ಬಿಲ್ ಹೌರ್ ಕೊಟ್ವಾಲಿ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ತಕ್ಷಣವೇ ದುಷ್ಕರ್ಮಿಗಳು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ತಕ್ಷಣವೇ ನವೀನ್ ರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅವರು ಅದಾಗಲೇ ಮೃತಪಟ್ಟಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News