×
Ad

ಮತದಾರರ ಪಟ್ಟಿಯಿಂದ ಕೈಬಿಟ್ಟ ಆದೇಶ: ಅರ್ಜಿ ವಜಾಗೊಳಿಸಿದ ಹೈಕೋರ್ಟ್

Update: 2017-11-30 22:33 IST

ಬೆಂಗಳೂರು, ನ.30: ಮೈಸೂರಿನಲ್ಲಿ 26 ಸಾವಿರ ಜನರನ್ನು ಮತದಾರರ ಪಟ್ಟಿಯಿಂದ ಕೈಬಿಟ್ಟಿರುವ ಆದೇಶವನ್ನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಮೈಸೂರು ಜಿಲ್ಲಾಧಿಕಾರಿ ಆದೇಶ ರದ್ದು ಕೋರಿ ಮಾಜಿ ಸಚಿವ ಎಸ್.ಎ.ರಾಮದಾಸ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ನ್ಯಾಯಮೂರ್ತಿ ಎಚ್.ಜಿ.ರಮೇಶ್ ಹಾಗೂ ನ್ಯಾಯಮೂರ್ತಿ ದಿನೇಶ್‌ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಆದೇಶ ನೀಡಿತು.

ಸರಕಾರದ ಪರ ವಾದಿಸಿದ ವಕೀಲರು, ಮತದಾರರ ವಿಳಾಸವನ್ನು ಹುಡುಕಿಕೊಂಡು ಹೋದಾಗ ಮತದಾರರು ಆ ವಿಳಾಸದಲ್ಲಿ ಇಲ್ಲ. ಹೀಗಾಗಿ, ಮೈಸೂರು ಜಿಲ್ಲಾಧಿಕಾರಿಗಳು 26 ಸಾವಿರ ಜನರನ್ನು ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಾರೆ ಎಂದು ಪೀಠಕ್ಕೆ ತಿಳಿಸಿದರು.

ಈ ಅರ್ಜಿಯೂ ಸಾರ್ವಜನಿಕ ಹಿತಾಸಕ್ತಿಯನ್ನು ಹೊಂದಿಲ್ಲ. ಬದಲಾಗಿ, ರಾಜಕೀಯ ಹಿತಾಸಕ್ತಿಯನ್ನು ಹೊಂದಿದಂತೆ ಕಾಣುತ್ತದೆ ಎಂದು ಪೀಠವು ಮೌಖಿಕ ಅಭಿಪ್ರಾಯಪಟ್ಟು ಅರ್ಜಿಯನ್ನು ವಜಾಗೊಳಿಸಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News