×
Ad

ದಲಿತ ಬಾಲಕಿ ಮೇಲೆ ಅತ್ಯಾಚಾರ

Update: 2017-11-30 23:38 IST

ಬೆಳ್ತಂಗಡಿ,ನ.30: ಧರ್ಮಸ್ಥಳ ಠಾಣಾ ವ್ಯಾಪ್ತಿಯ ಶಿಬಾಜೆ ಎಂಬಲ್ಲಿ ದಲಿತ ಬಾಲಕಿಯ ಮೇಲೆ ಸ್ಥಳೀಯ ಯುವಕನೋರ್ವ ಅತ್ಯಾಚಾರ ನಡೆಸಿದ ಘಟನೆ ಬಹಿರಂಗಗೊಂಡಿದ್ದು ಆರೋಪಿ ನವೀನ್(23) ಎಂಬಾತನನ್ನು  ಪೋಲೀಸರು ಬಂಧಿಸಿದ್ದಾರೆ.

ನವೀನ್ ಸ್ಥಳೀಯ 17 ರ ಹರೆಯದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಆಕೆಯನ್ನು ಗರ್ಭಿಣಿಯಾಗಿಸಿದ್ದಾನೆ ಈ ಬಗ್ಗೆ ಯಾರಿಗೂ ಹೇಳದಂತೆ ಬೆದರಿಸಿದ್ದಾನೆ ಎನ್ನಲಾಗಿದೆ ಇದೀಗ ಆಕೆ ಗರ್ಭಿಣಿಯಾಗಿದ್ದು ಮನೆಯವರಿಗೆ ವಿಚಾರ ತಿಳಿದಿದೆ. ಕೂಡಲೇ ಧರ್ಮಸ್ಥಳ ಪೋಲೀಸರಿಗೆ ದೂರು ನೀಡಿದ್ದಾರೆ. ಪೋಲೀಸರು ಪ್ರಕರಣ ದಾಖಲಿಸಿಕೊಂಡು ಕೂಡಲೇ ಆರೋಪಿ ನವೀನ್‍ನನ್ನು ಬಂಧಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News