×
Ad

ಕ್ರೀಡಾ ರಾಜಧಾನಿಯಾಗಿ ಉಡುಪಿ ಕನಸು ಸಾಕಾರದತ್ತ: ಪ್ರಮೋದ್

Update: 2017-12-01 17:57 IST

ಉಡುಪಿ, ಡಿ.1: ಎಲ್ಲಾ ರೀತಿಯ ಕ್ರೀಡೆಗಳನ್ನು ನಡೆಸಲು ಅನುಕೂಲ ವಾಗುವಂತೆ, ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಒದಗಿಸುವ ಮೂಲಕ ಉಡುಪಿಯನ್ನು ‘ಕ್ರೀಡಾ ರಾಜಧಾನಿ’ಯಾಗಿ ಮಾಡುವ ತಮ್ಮ ಕನಸು ನನಸಾಗುವತ್ತ ಸಾಗುತ್ತಿದೆ ಎಂದು ರಾಜ್ಯ ಮೀನುಗಾರಿಕೆ, ಯುವಸಬಲೀಕರಣ ಹಾಗೂ ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಉಡುಪಿ ಅಜ್ಜರಕಾಡಿನಲ್ಲಿರುವ ಈಜುಕೊಳಕ್ಕೆ ಮೇಲ್ಚಾವಣಿ ನಿರ್ಮಿಸಲು 1.51 ಕೋಟಿ ರೂ. ಮೊತ್ತದ ಕಾಮಗಾರಿಗೆ ಗುರುವಾರ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡುತಿದ್ದರು.

ಕಳೆದ ಚುನಾವಣಾ ಪೂರ್ವ ಜಿಲ್ಲೆಯಲ್ಲಿ ಎಲ್ಲಾ ರೀತಿಯ ಕ್ರೀಡೆಗಳಿಗೆ ಅನುಕೂಲವಾಗುವಂತೆ ಮೂಲಭೂತ ಅವಶ್ಯಕತೆ ಪೂರೈಸಿ ಉಡುಪಿಯನ್ನು ಕ್ರೀಡಾ ರಾಜಧಾನಿಯನ್ನಾಗಿ ಮಾಡುವ ವಿಷನ್ 2025ರ ನನ್ನ ಕನಸು ಈಗ ಸಾಕಾರಗೊಂಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೂ ಆಗಿರುವ ಪ್ರಮೋದ್ ನುಡಿದರು.

ಉಡುಪಿಯಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಜಿಮ್‌ನ್ನು ಪ್ರಾರಂಭಿಸಲು ಈಗಾಗಲೇ ಟೆಂಡರ್ ನೀಡಲಾಗಿದೆ. 3.75 ಕೋಟಿ ರೂ. ವೆಚ್ಚದಲ್ಲಿ ಒಳಾಂಗಣ ಲಾನ್ ಟೆನಿಸ್ ಕ್ರೀಡಾಂಗಣ, ಕಬಡ್ಡಿ ಕ್ರೀಡಾಂಗಣ ಹಾಗೂ ಕುಸ್ತಿ ಕ್ರೀಡಾಂಗಣ ನಿರ್ಮಾಣಕ್ಕೆ ಹಣಕಾಸು ಇಲಾಖೆಯ ಅನುಮೋದನೆ ಸಿಕ್ಕಿದ್ದು, ಶೀಘ್ರವೇ ಕಾಮಗಾರಿ ಪ್ರಾರಂಭವಾಗಲಿದೆ ಎಂದರು.

ಒಂದು ಕೋಟಿ ರೂ. ವೆಚ್ಚದಲ್ಲಿ ಮಹಿಳಾ ಕ್ರೀಡಾ ಹಾಸ್ಟೆಲ್ ನಿರ್ಮಾಣಕ್ಕೆ ಟೆಂಡರ್ ಅಗಿದ್ದು, ಇದರಲ್ಲಿ ಕ್ರೀಡಾಪಟುಗಳು ಪದವಿವರೆಗೂ ಮುಂದುವ ರಿಯಲು ಅವಕಾಶ ಕಲ್ಪಿಸಲಾಗಿದೆ. ಮಲ್ಪೆ ಮತ್ತು ಪಡುಕರೆಗಳಲ್ಲಿ ಸಾಹಸ ಕ್ರೀಡೆ ನಡೆಸಲು 2 ಎಕರೆ ಜಾಗವನ್ನು ಗುರುತಿಸಲಾಗಿದೆ ಎಂದರು.

ಮಲ್ಪೆ ಬೀಚ್‌ನಲ್ಲಿ 9 ಕೋಟಿ ರೂ.ವೆಚ್ಚದಲ್ಲಿ ಬೀಚ್ ವಾಕರ್ ನಿರ್ಮಾಣಕ್ಕೆ ಅಗತ್ಯ ಕಾಮಗಾರಿಗೆ ಅನುಮೋದನೆ ನೀಡಲಾಗಿದೆ. ಉಡುಪಿ ಒಳಾಂಗಣ ಕ್ರೀಡಾಂಗಣಕ್ಕೆ ಎಸಿ ಅಳವಡಿಸಲು ಹಣ ಬಿಡುಗಡೆ ಮಾಡಲಾಗಿದ್ದು, ಟೆಂಡರ್ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ. ಬ್ರಹ್ಮಾವರದಲ್ಲಿ 5.5 ಎಕರೆ ಪ್ರದೇಶದಲ್ಲಿ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ ಮಾಡಲು ನಿರ್ಧರಿಸಿ ಪ್ರಯತ್ನಗಳು ನಡೆಯುತ್ತಿವೆ ಎಂದರು.

ತಾನು ಶಾಸಕನಾಗಿದ್ದಾಗ ಜಿಲ್ಲೆಯಲ್ಲಿ ಕ್ರೀಡಾಭಿವೃದ್ಧಿಗೆ 8 ಕೋಟಿ ರೂ. ಹಾಗೂ ಕ್ರೀಡಾ ಸಚಿವನಾದ ಮೇಲೆ 20 ಕೋಟಿಗೂ ಅಧಿಕ ಅನುದಾನ ಬಿಡುಗಡೆ ಮಾಡಲಾಗಿದೆ. ಉಡುಪಿಯಲ್ಲಿ ಎಲ್ಲಾ ರೀತಿಯ ಕ್ರೀಡೆಗಳಿಗೆ ಅಗತ್ಯವಾದ ಮೂಲಭೂತ ಸೌಕರ್ಯ ಒದಗಿಸುವ ಮೂಲಕ ಇದನ್ನು ಕ್ರೀಡಾ ರಾಜಧಾನಿಯನ್ನಾಗಿ ಮಾಲು ಪ್ರಯತ್ನಿಸಲಾಗುತ್ತಿದೆ ಎಂದರು.

ತಾನು ಶಾಸಕನಾಗಿದ್ದಾಗ ಜಿಲ್ಲೆಯಲ್ಲಿ ಕ್ರೀಡಾಭಿವೃದ್ಧಿಗೆ 8 ಕೋಟಿ ರೂ. ಹಾಗೂ ಕ್ರೀಡಾ ಸಚಿವನಾದ ಮೇಲೆ 20 ಕೋಟಿಗೂ ಅಧಿಕ ಅನುದಾನ ಬಿಡುಗಡೆ ಮಾಡಲಾಗಿದೆ. ಉಡುಪಿಯಲ್ಲಿ ಎಲ್ಲಾ ರೀತಿಯ ಕ್ರೀಡೆಗಳಿಗೆ ಅಗತ್ಯವಾದ ಮೂಲೂತಸೌಕರ್ಯಒದಗಿಸುವಮೂಲಕಇದನ್ನುಕ್ರೀಡಾರಾಜಾನಿಯನ್ನಾಗಿ ಮಾಡಲು ಪ್ರಯತ್ನಿಸಲಾಗುತ್ತಿದೆ ಎಂದರು. ಕ್ರೀಡಾ ಇಲಾಖೆಯ ಜಂಟಿ ನಿರ್ದೇಶಕ ಅಭಿಜಿನ್, ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ಅಧ್ಯಕ್ಷ ದಿನೇಶ್ ಪುತ್ರನ್, ಈಜುಕೊಳದ ಉಸ್ತುವಾರಿ ಯತೀಶ್, ರಾಜ್ಯ ಯುವ ಒಕ್ಕೂಟಗಳ ಅಧ್ಯಕ್ಷ ಡಾ.ಬಾಲಾಜಿ ಉಪಸ್ಥಿತರಿದ್ದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿ, ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News