'ಸಮನ್ವಯ ಸಿರಿ ಪ್ರಶಸ್ತಿ'ಗೆ ನಾಮನಿರ್ದೇಶನಕ್ಕೆ ಆಹ್ವಾನ
Update: 2017-12-01 17:58 IST
ಬೆಂಗಳೂರು, ಡಿ.1: ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ‘ಸಮನ್ವಯ ಸಿರಿ’ ರಾಷ್ಟ್ರೀಯ ಪ್ರಶಸ್ತಿಗೆ ಅರ್ಹರಿರುವವರನ್ನು ನಾಮ ನಿರ್ದೇಶನ ಮಾಡುವಂತೆ ಎಸ್‌ಜೆಪಿವಿವಿ ಪೀಠ ಹಾಗೂ ರಾಷ್ಟ್ರೀಯ ಪ್ರಶಸ್ತಿ ಆಯ್ಕೆ ಸಮಿತಿ ಅರ್ಜಿ ಮನವಿ ಮಾಡಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪೀಠದ ಉಪಾಧ್ಯಕ್ಷ ಡಿ.ಎಂ.ಹಾಲಸ್ವಾಮಿ, ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಮತ್ತು ಆಯುರ್ವೇದ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಒಬ್ಬರಿಗೆ 'ಸಮನ್ವಯ ಸಿರಿ' ಪ್ರಶಸ್ತಿ ನೀಡಲಾಗುತ್ತದೆ. ಹೀಗಾಗಿ, ಈ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಅರ್ಹರನ್ನು ಸಾರ್ವಜನಿಕರು ನಾಮನಿರ್ದೇಶನ ಮಾಡಬಹುದಾಗಿದೆ ಎಂದು ಹೇಳಿದರು.
ಪ್ರಶಸ್ತಿಯು 50 ಸಾವಿರ ನಗದು, ಸ್ಮರಣಿಕೆ ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿದ್ದು, ಶ್ರೀಶೈಲ ಜಗದ್ಗುರು ಡಾ.ಚೆನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಸಾನಿಧ್ಯದಲ್ಲಿ 2018 ರ ಜನವರಿಯಲ್ಲಿ ನಡೆಯುವ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.