×
Ad

ಜೈಲಿನಲ್ಲಿ ಅಕ್ರಮ ಎಸಗಿದವರ ವಿರುದ್ಧ ಸೂಕ್ತ ಕ್ರಮ: ರಾಮಲಿಂಗಾರೆಡ್ಡಿ

Update: 2017-12-01 19:13 IST

ಬೆಂಗಳೂರು, ಡಿ.1: ಪರಪ್ಪನ ಅಗ್ರಹಾರದಲ್ಲಿರುವ ಜೈಲಿನಲ್ಲಿ ಅಕ್ರಮ ಎಸಗಿರುವ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೈಲಿನಲ್ಲಿ ನಡೆದಿರುವ ಅಕ್ರಮಗಳ ಕುರಿತ ಐಎಎಸ್ ಅಧಿಕಾರಿ ತನಿಖೆ ನಡೆಸಿ, ವರದಿ ನೀಡಿದ್ದಾರೆ. ಜೈಲಿನಲ್ಲಿ ನಡೆದಿರುವ ಅಕ್ರಮದ ಬಗ್ಗೆ ಅಧ್ಯಯನ ನಡೆಸಿ 2 ಸಾವಿರ ಪುಟಗಳ ವರದಿ ನೀಡಿದ್ದಾರೆ. ಈ ವರದಿಯನ್ನು ತಾವಿನ್ನೂ ಪರಿಶೀಲಿಸಿಲ್ಲ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

ಅಪರಾಧಗಳ ಸಂಖ್ಯೆಯಲ್ಲಿ ಬೆಂಗಳೂರು ಎರಡನೆ ಸ್ಥಾನದಲ್ಲಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, 2015ಕ್ಕೆ ಹೋಲಿಸಿದರೆ, 2017 ರಲ್ಲಿ ನಡೆದಿರುವ ಅಪರಾಧಗಳ ಸಂಖ್ಯೆ ಇಳಿಮುಖವಾಗಿದೆ. ಈ ಪೈಕಿ 10 ಸಾವಿರ ಪ್ರಕರಣಗಳು ಸಂಚಾರಿ ನಿಯಮ ಉಲ್ಲಂಘಿಸಿದ ಪ್ರಕರಣಗಳಾಗಿವೆ. ಹೀಗಾಗಿ ಇದು ಅಪರಾಧ ಪ್ರಕರಣವಲ್ಲ ಎಂದು ಸ್ಪಷ್ಟಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News