ಡಿ.3ರಂದು ವಿಶ್ವ ವಿಕಲಚೇತನರ ದಿನಾಚರಣೆ
Update: 2017-12-01 21:31 IST
ಉಡುಪಿ, ಡಿ.1: ಜಿಲ್ಲಾಡಳಿತ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಉಡುಪಿ, ವಿಕಲಚೇತನರ ಕ್ಷೇತ್ರದಲ್ಲಿ ಸೇವೆ ಗೈಯುವ ಸ್ವಯಂ ಸೇವಾ ಸಂಸ್ಥೆಗಳು ಮತ್ತು ವಿಕಲಚೇತನರ ಸಂಘಟನೆಗಳ ಆಶ್ರಯದಲ್ಲಿ ಡಿ.3ರಂದು ಮಣಿಪಾಲದ ಗ್ರೀನ್ಸ್ ಗಾರ್ಡ್‌ನ್‌ನಲ್ಲಿ ಬೆಳಗ್ಗೆ 10 ಗಂಟೆಗೆ ಜಿಲ್ಲಾ ಮಟ್ಟದ ವಿಶ್ವ ವಿಕಲಚೇತನ ದಿನಾಚರಣೆಯನ್ನು ಆಯೋಜಿಸಲಾಗಿದೆ.
ರಾಜ್ಯ ಮೀನುಗಾರಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ವಿಕಲಚೇತನ ರಿಗೆ ಸನ್ಮಾನ, ಬಹುಮಾನ ವಿತರಣೆ, ಸಾಧನೆ ಸಲಕರಣೆ ಮತ್ತು ಯಂತ್ರಚಾಲಿತ ದ್ವಿಚಕ್ರ ವಾಹನ ವಿತರಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾ ವಿಕಲಚೇತನ ಮತ್ತು ಸಬಲೀಕರಣ ಇಲಾಖೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.