ಆಳ್ವಾಸ್ ನುಡಿಸಿರಿಗೆ ಚಾಲನೆ

Update: 2017-12-01 18:37 GMT

ಮೂಡುಬಿದಿರೆ ವಿದ್ಯಾಗಿರಿಯ ಎಂ.ಗೋಪಾಲಕೃಷ್ಣ ಅಡಿಗ ಸಭಾಂಗಣದ ರತ್ನಾಕರವರ್ಣಿ ವೇದಿಕೆಯಲ್ಲಿ 3 ದಿನಗಳ ಕಾಲ ನಡೆಯುವ 14ನೇ ವರ್ಷದ ‘ಆಳ್ವಾಸ್ ನುಡಿಸಿರಿ-2017’ ಅನ್ನು ಶುಕ್ರವಾರ ಖ್ಯಾತ ವಿಮರ್ಶಕ ಡಾ.ಸಿ.ಎನ್. ರಾಮಚಂದ್ರನ್ ಅವರು ಭತ್ತದ ತೆನೆಗೆ ಹಾಲೆರೆಯುವ ಮೂಲಕ ಸಾಂಪ್ರದಾಯಿಕ ರೀತಿಯಲ್ಲಿ ಉದ್ಘಾಟಿಸಿದರು. ಈ ಸಂದರ್ಭ ಸಮ್ಮೇಳನಾಧ್ಯಕ್ಷ ಡಾ.ನಾಗತಿಹಳ್ಳಿ ಚಂದ್ರಶೇಖರ್, ಕಸಾಪ ಅಧ್ಯಕ್ಷ ಡಾ.ಮನು ಬಳಿಗಾರ್, ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ಕೆ.ಅಭಯಚಂದ್ರ ಜೈನ್, ನುಡಿಸಿರಿಯ ರೂವಾರಿ ಡಾ.ಮೋಹನ್ ಆಳ್ವ, ಮಾಜಿ ಸಚಿವ ಅಮರನಾಥ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಕ್ಯಾ. ಗಣೇಶ್ ಕಾರ್ಣಿಕ್, ಜಯಶ್ರೀ ಅಮರನಾಥ ಶೆಟ್ಟಿ. ಏರ್ಯ ಲಕ್ಷ್ಮೀ ನಾರಾಯಣ ಆಳ್ವ, ಐಕಳ ಹರೀಶ್ ಶೆಟ್ಟಿ, ವಂ. ಗೋಮ್ಸ್ ವೇದಿಕೆಯಲ್ಲಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor