ಕಂಕನಾಡಿ ಗರೋಡಿ ಅಭಿವೃದ್ಧಿ ಬಗ್ಗೆ ಸಭೆ
Update: 2017-12-02 17:42 IST
ಮಂಗಳೂರು, ಡಿ.2: ಕಂಕನಾಡಿಯ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ಬ್ರಹ್ಮಕಲಶೋತ್ಸವಕ್ಕೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ಅಧಿಕಾರಿಗಳು ಕೆಲಸ ನಿರ್ವಹಿಸಬೇಕು ಎಂದು ಶಾಸಕ ಜೆ.ಆರ್.ಲೋಬೊ ಸೂಚಿಸಿದರು.
ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರಕ್ಕೆ ಭೇಟಿ ನೀಡಿ ಸಮಾಲೋಚನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಸಭೆಯಲ್ಲಿ ಕ್ಷೇತ್ರದ ಅಧ್ಯಕ್ಷ ಕೆ.ಚಿತ್ತರಂಜನ್, ಕಾರ್ಪೊರೇಟರ್‌ಗಳಾದ ಪ್ರವೀಣ್ ಚಂದ್ರ ಆಳ್ವಾ, ಆಶಾ ಡಿಸಿಲ್ವಾ, ಕಂದಾಯ ಅಧಿಕಾರಿ ಮಂಜುನಾಥ್ ಶೆಟ್ಟಿ, ಮೆಸ್ಕಾಂ ಅಧಿಕಾರಿ ಗಾಯತ್ರಿ ನಾಯಕ್, ಕ್ಷೇತ್ರದ ಮೊಕ್ತೇಸರರಾದ ಜೆ. ಸುರೇಂದ್ರನಾಥ್, ವಾಮನ ಕೇಶವ ಅಂಗಡಿಮಾರ್, ಕ್ಷೇತ್ರದ ಮ್ಯಾನೇಜರ್ ಜೆ.ಕಿಶೋರ್ ಕುಮಾರ್ ಮಜಿಲ, ಎಪಿಎಂಸಿ ಸದಸ್ಯ ಭರತೇಶ್ ಅಮೀನ್, ಸಂದೀಪ್ ಸಾಲ್ಯಾನ್ ಉಪಸ್ಥಿತರಿದ್ದರು.