×
Ad

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

Update: 2017-12-02 18:48 IST

ಉಡುಪಿ, ಡಿ.2: ಪ್ರಸಕ್ತ ಸಾಲಿನ ಸಮಾಜ ಕಲ್ಯಾಣ ಇಲಾಖೆಯಿಂದ ಮ್ಯಾನುಯಲ್ ಸ್ಕಾವೆಂಜಿಂಗ್, ಟಾನರ್ಸ್‌ ಮತ್ತು ಕಸ ಹೆಕ್ಕುವವರ ವೃತ್ತಿಯಲ್ಲಿ ತೊಡಗಿದ್ದ/ತೊಡಗಿರುವವರುಯಾವುದೇ ಜಾತಿ ಅಥವಾ ಧರ್ಮಕ್ಕೆ ಸೇರಿದ್ದರೂ ಅಂತಹ ಮಕ್ಕಳಿಗೆ ಕೇಂದ್ರ ಪುರಸ್ಕೃತ ಯೋಜನೆಯಾದ ಅನೈರ್ಮಲ್ಯ ವೃತ್ತಿಯಲ್ಲಿ ತೊಡಗಿರುವ ಪೋಷಕರ ಮಕ್ಕಳಿಗೆ 1ರಿಂದ 10 ನೇ ತರಗತಿಯವರೆಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನವನ್ನು ಮಂಜೂರ ಮಾಡಲು ಇಲಾಖೆಯ ವೆಬ್‌ಸೈಟ್  ww.sw.kar.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹೆಚ್ಚಿನ ಮಾಹಿತಿ ಹಾಗೂ ವಿವರಗಳಿಗೆ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಉಡುಪಿ, ಕಾರ್ಕಳ ಮತ್ತು ಕುಂದಾಪುರ ತಾಲೂಕು ಇವರನ್ನು ಸಂಪರ್ಕಿಬಹುದು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News