ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳು
ಉಡುಪಿ, ಡಿ. 2: ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮವು ಮತೀಯ ಅಲ್ಪಸಂಖ್ಯಾತರಿಗೆ ಆಟೋಮೊಬೈಲ್ ಸರ್ವೀಸ್, ಕೃಷಿ ಯಂತ್ರೋಪಕರಣ ಖರೀದಿ ಸಾಲ ಸೌಲ್ಯ, ಮನೆ ಮಳಿಗೆ ಯೋಜನೆ ಮುಂತಾದವುಗಳಿಗೆ ಅಲ್ಪಸಂಖ್ಯಾತ ಮುಸ್ಲಿಮ್, ಕ್ರೈಸ್ತರು ಹಾಗೂ ಇತರೆ ಜನಾಂಗದವರಿಂದ ಅರ್ಜಿ ಗಳನ್ನು ಆಹ್ವಾನಿಸಿದೆ.
ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿದ್ದು, ಕನಿಷ್ಟ 15 ವರ್ಷದಿಂದ ಗರಿಷ್ಟ 45 ವರ್ಷದವರೆಗೆ ವಾಸವಾಗಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ 6 ಲಕ್ಷ ರೂ.ಮೀರಬಾರದು. ಶೇ.33ರಷ್ಟು ಮಹಿಳೆಯರಿಗೆ, ಶೇ.3 ಅಂಗವಿಕಲರಿಗೆ ಹಾಗೂ ಮಾಜಿ ಸೈನಿಕರಿಗೆ ಮೀಸಲಾತಿ ಇರುತ್ತದೆ. ಅರ್ಜಿದಾರರು ತಮ್ಮ ವಿಳಾಸದ ದೃಡೀಕರಣಕ್ಕಾಗಿ ಆಧಾರ್ ಪ್ರತಿಯನ್ನು ಸಲ್ಲಿಸಬೇಕು ಮತ್ತು ಅದನ್ನು ಅವರ ಬ್ಯಾಂಕ್‌ನ ಉಳಿತಾಯ ಖಾತೆಗೆ ಲಿಂಕ್ ಮಾಡಬೇಕು.
ಅರ್ಜಿ ನಮೂನೆಯನ್ನು ಹಾಗೂ ಸಂಬಂಧಿಸಿದ ವಿವರಗಳನ್ನು ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ನಿಗಮ, ಎ ಬ್ಲಾಕ್ 1ನೇ ಮಹಡಿ, ಕೊಠಡಿ ಸಂಖ್ಯೆ ಎ207, ರಜತಾದ್ರಿ ಜಿಲ್ಲಾಧಿಕಾರಿಗಳ ಸಂಕೀರ್ಣ, ಮಣಿಪಾಲ, ಉಡುಪಿ ಜಿಲ್ಲೆ ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ವೌಲಾನಾ ಆಜಾದ್ ಭವನ, ಓಲ್ಡ್ ಕೆಂಟ್ ರಸ್ತೆ, ಪಾಂಡೇಶ್ವರ ಮಂಗಳೂರು ಇಲ್ಲಿಂದ ಅರ್ಜಿ ಪಡೆದು ದಾಖಲಾತಿ ಗಳೊಂದಿಗೆ ಡಿ.15ರೊಳಗೆ ಅರ್ಜಿ ಸಲ್ಲಿಸುವಂತೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಪ್ರಕಟನೆ ತಿಳಿಸಿದೆ.