ಕಿಶೋರ ಯಕ್ಷ ದಶಮಾನ ಸಂಭ್ರಮ ಉದ್ಘಾಟನೆ
ಉಡುಪಿ, ಡಿ. 2: ಉಡುಪಿಯ ಯಕ್ಷ ಶಿಕ್ಷಣ ಟ್ರಸ್ಟ್ ವತಿಯಿಂದ ಪ್ರತಿವರ್ಷ ಆಯೋಜಿಸಲಾಗುವ ಕಿಶೋರ ಯಕ್ಷ ಸಂಭ್ರಮದ ದಶಮಾನೋತ್ಸವ ಶನಿವಾರ ಸಂಜೆ ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ಉದ್ಘಾಟನೆಗೊಂಡಿತು.
ಪರ್ಯಾಯ ಶ್ರೀ ಪೇಜಾವರ ಅಧೋಕ್ಷಜ ಮಠದ ಶ್ರೀವಿಶ್ವೇಶತೀರ್ಥ ಸಮಾರಂಭವನ್ನು ದೀಪಬೆಳಗಿಸಿ ಉದ್ಘಾಟಿಸಿದರು. ಕಿರಿಯ ಯತಿಗಳಾದ ಶ್ರೀ ವಿಶ್ವಪ್ರಸನ್ನತೀರ್ಥ ಆಶೀರ್ವಚನ ನೀಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅಂಬಲಪಾಡಿ ದೇವಳದ ಧರ್ಮದರ್ಶಿ ಡಾ.ನಿ.ಬೀ ವಿಜಯ ಬಲ್ಲಾಳ್, ಪೇಜಾವರ ಮಠದ ದಿವಾನ ಎಂ. ರಘುರಾಮ ಆಚಾರ್ಯ, ಸ್ಥಾಪಕ ಟ್ರಸ್ಟಿ, ಮಾಜಿ ಶಾಸಕ ಕೆ.ರಘುಪತಿ ಭಟ್ ಹಾಗೂ ಕರ್ಣಾಟಕ ಬ್ಯಾಂಕಿನ ಎಜಿಎಂ ವಿದ್ಯಾಲಕ್ಷ್ಮಿ ಭಾಗವಹಿಸಿದ್ದರು.
ಯಕ್ಷಗಾನ ಕಲಾರಂಗದ ಎಸ್.ವಿ.ಭಟ್, ಎಂ.ಗಂಗಾಧರ ರಾವ್, ಪಿ.ಕಿಶನ್ ಹೆಗ್ಡೆ ಉಪಸ್ಥಿತರಿದ್ದರು. ಇದೇ ಸಂದರ್ದಲ್ಲಿ ಯಕ್ಷಗಾನ ಕಲಾರಂಗದ ವಾರ್ಷಿಕ ಸಂಚಿಕೆ ಕಲಾಂತರಂಗ-2017ನ್ನು ಪೇಜಾವರಶ್ರೀಗಳು ಬಿಡುಗಡೆ ಮಾಡಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಕಾರ್ಯಕ್ರಮ ನಿರ್ವಹಿಸಿದರು. ಕೋಶಾಧಿಕಾರಿ ಕೆ.ಎಸ್ ಸುಬ್ರಹ್ಮಣ್ಯ ಬಾಸ್ರಿ ವಂದಿಸಿದರು.
ಯಕ್ಷಗಾನ ಕಲಾರಂಗದ ಎಸ್.ವಿ.ಟ್,ಎಂ.ಗಂಗಾರ ರಾವ್, ಪಿ.ಕಿಶನ್ ಹೆಗ್ಡೆ ಉಪಸ್ಥಿತರಿದ್ದರು. ಇದೇ ಸಂದರ್ದಲ್ಲಿ ಯಕ್ಷಗಾನ ಕಲಾರಂಗದ ವಾರ್ಷಿಕ ಸಂಚಿಕೆ ಕಲಾಂತರಂಗ-2017ನ್ನು ಪೇಜಾವರಶ್ರೀಗಳು ಬಿಡುಗಡೆ ಮಾಡಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಕಾರ್ಯಕ್ರಮ ನಿರ್ವಹಿಸಿದರು.
ಕೋಶಾಧಿಕಾರಿ ಕೆ.ಎಸ್ ಸುಬ್ರಹ್ಮಣ್ಯ ಬಾಸ್ರಿ ವಂದಿಸಿದರು. ಸಭಾಕಾರ್ಯಕ್ರಮದ ಬಳಿಕ ನಿಟ್ಟೂರು ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ ‘ಶ್ವೇತಕುಮಾರ ಚರಿತೆ’ ಯಕ್ಷಗಾನ ಪ್ರದರ್ಶನ ಜರಗಿತು. ಡಿ.2ರಿಂದ 16 ರವರೆಗೆ ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಹಾಗೂ ಡಿ.17ರಿಂದ 24ರವರೆಗೆ ಬ್ರಹ್ಮಾವರದಲ್ಲಿ ಒಟ್ಟು 42 ಪ್ರೌಢಶಾಲೆಗಳ 43 ಪ್ರದರ್ಶನ ನಡೆಯಲಿದೆ.