×
Ad

ಕಾನೂನು ಸಂಘರ್ಷಕ್ಕೆ ಒಳಗಾದ ಮಕ್ಕಳಿಗೆ ಉತ್ತಮ ಪರಿಸರ ಅಗತ್ಯ: ನ್ಯಾ.ದಿನೇಶ್ ಕುಮಾರ್

Update: 2017-12-02 22:53 IST

ಉಡುಪಿ, ಡಿ.2: ಕಾನೂನಿನ ಸಂಘರ್ಷಕ್ಕೆ ಸಿಲುಕಿ, ವೀಕ್ಷಣಾಲಯದಲ್ಲಿರುವ (ಸ್ಟೇಟ್‌ಹೋಮ್) ಮಕ್ಕಳಿಗೆ ಉತ್ತಮ ವಾತಾವರಣ ನಿರ್ಮಿಸಿ, ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವುದು ಸಂಬಂಧಪಟ್ಟ ಪ್ರತಿಯೊಂದು ಇಲಾಖೆ ಹಾಗೂ ಸಂಸ್ಥೆಗಳ ಜವಾಬ್ದಾರಿ ಎಂದು ಕರ್ನಾಟಕ ಹೈಕೋರ್ಟ್ ಹಾಗೂ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಹೇಳಿದ್ದಾರೆ.

ಶನಿವಾರ ನಿಟ್ಟೂರಿನಲ್ಲಿರುವ ಸರಕಾರಿ ವೀಕ್ಷಣಾಲಯದಲ್ಲಿ ನಿರ್ಮಿಸಿರುವ ಬ್ಯಾಡ್ಮಿಂಟನ್ ಕೋರ್ಟ್‌ನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು. ಶನಿವಾರ ನಿಟ್ಟೂರಿನಲ್ಲಿರುವ ಸರಕಾರಿ ವೀಕ್ಷಣಾಲಯದಲ್ಲಿ ನಿರ್ಮಿಸಿರುವ ಬ್ಯಾಡ್ಮಿಂಟನ್ ಕೋರ್ಟ್‌ನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು. ಮಕ್ಕಳು ತಮಗೆ ಅರಿವಿಲ್ಲದೆಯೇ ಕಾನೂನು ಸಂಘರ್ಷಕ್ಕೆ ಸಿಲುಕಿಕೊಳ್ಳುತ್ತಾರೆ. ಅವರಿಗೆ ಸರಿಯಾದ ಮಾರ್ಗದರ್ಶನ ನೀಡಿ ಸಮಾಜದ ಉತ್ತಮ ವ್ಯಕ್ತಿಯಾಗಿ ರೂಪುಗೊಳ್ಳಲು ಅವರಿಗೆ ಉತ್ತಮ ವಾತಾವರಣ ನಿರ್ಮಿಸಬೇಕು. ವೀಕ್ಷಣಾ ಲಯಗಳಲ್ಲಿ ಅವರಿಗೆ ಯೋಗ, ಪ್ರಾಣಾಯಾಮದಂತಹ ಚಟುವಟಿಕೆಗಳ ಜೊತೆಗೆ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಲು ಸೌಲಭ್ಯಗಳನ್ನು ಒದಗಿಸಬೇಕು. ಕ್ರೀಡೆಯಿಂದ ಮಕ್ಕಳ ಮನಸ್ಸು ಆಹ್ಲಾದಕರವಾಗಿರುವುದಲ್ಲದೇ, ಮಕ್ಕಳಿಗೆ ಉತ್ತಮ ವ್ಯಾಯಾಮ ದೊರೆಯಲಿದೆ ಎಂದು ನ್ಯಾಯಧೀಶರು ಹೇಳಿದರು.

 ಮಕ್ಕಳು ತಮಗೆ ಅರಿವಿಲ್ಲದೆಯೇ ಕಾನೂನು ಸಂಘರ್ಷಕ್ಕೆ ಸಿಲುಕಿಕೊಳ್ಳುತ್ತಾರೆ. ಅವರಿಗೆ ಸರಿಯಾದ ಮಾರ್ಗದರ್ಶನ ನೀಡಿ ಸಮಾಜದ ಉತ್ತಮ ವ್ಯಕ್ತಿಯಾಗಿ ರೂಪುಗೊಳ್ಳಲು ಅವರಿಗೆ ಉತ್ತಮ ವಾತಾವರಣ ನಿರ್ಮಿಸಬೇಕು. ವೀಕ್ಷಣಾ ಲಯಗಳಲ್ಲಿ ಅವರಿಗೆ ಯೋಗ, ಪ್ರಾಣಾಯಾಮದಂತಹ ಚಟುವಟಿಕೆಗಳ ಜೊತೆಗೆ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಲು ಸೌಲ್ಯಗಳನ್ನುಒದಗಿಸಬೇಕು. ಕ್ರೀಡೆಯಿಂದ ಮಕ್ಕಳ ಮನಸ್ಸು ಆಹ್ಲಾದಕರವಾಗಿರುವು ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ವೆಂಕಟೇಶ್ ನಾಯ್ಕಾ ಟಿ., ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಲತಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕಿ ಗ್ರೇಸಿ ಗೋನ್ಸಾಲ್ವಿಸ್ ಉಪಸ್ಥಿತರಿದ್ದರು.

ಬಿ.ಕೆ. ನಾರಾಯಣ್ ಸ್ವಾಗತಿಸಿ, ಬಾಲ ನ್ಯಾಯ ಮಂಡಳಿ ಸದಸ್ಯೆ ಅಮೃತಕಲಾ ವಂದಿಸಿದರು. ಸರ್ವೇಶ್ವರ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News