ಆರ್.ಕೆ. ನಗರ ಉಪಚುನಾವಣೆ: ಸ್ವತಂತ್ರ ಅಭ್ಯರ್ಥಿಯಾಗಿ ನಟ ವಿಶಾಲ್
Update: 2017-12-03 12:15 IST
ಚೆನ್ನೈ, ಡಿ.3: ಮುಂಬರುವ ಆರ್ ಕೆ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ತಮಿಳು ನಟ ವಿಶಾಲ್ ಸ್ಪರ್ಧಿಸಲಿದ್ದಾರೆ. ಈ ಬಗ್ಗೆ ಅಧಿಕೃತವಾಗಿ ಅವರು ಘೋಷಿಸಿದ್ದಾರೆ.
“ನಾನು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದೇನೆ. ಜನರು ಏನು ಬಯಸಿದ್ದಾರೆ ಎಂದು ಹೇಳಬೇಕು, ನಾನದನ್ನು ಮಾಡಬಲ್ಲೆ” ಎಂದವರು ಹೇಳಿದ್ದಾರೆ.
“ಮುಂಬರುವ ಆರ್ ಕೆ ನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ನಾನು ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ಈ ಮೂಲಕ ತಿಳಿಸುತ್ತಿದ್ದೇನೆ. ಸೋಮವಾರ ನಾಮಪತ್ರ ಸಲ್ಲಿಸಲಿದ್ದೇನೆ” ಎಂದವರು ಟ್ವೀಟ್ ಮಾಡಿದ್ದಾರೆ.