ಮುಖ್ಯಮಂತ್ರಿ ಸಿದ್ದರಾಮಯ್ಯ ಡಿ.4ರಂದು ಹೊಸದಿಲ್ಲಿಗೆ
Update: 2017-12-03 18:40 IST
ಬೆಂಗಳೂರು, ಡಿ. 3: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಡಿ.4 ಉಪಾಧ್ಯಕ್ಷ ರಾಹುಲ್ಗಾಂಧಿ ನಾಮಪತ್ರ ಸಲ್ಲಿಸಲಿರುವ ಹಿನ್ನೆಲೆಯಲ್ಲಿ ನಾಳೆ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಸದಿಲ್ಲಿಗೆ ತೆರಳಲಿದ್ದಾರೆ.
ರಾಹುಲ್ಗಾಂಧಿಯವರು ಅಧ್ಯಕ್ಷ ಸ್ಥಾನದ ಚುನಾವಣೆಗೆ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಹಾಜರಿರಬೇಕಿದ್ದು, ಹೊಸದಿಲ್ಲಿಗೆ ತೆರಳಲಿದ್ದು ಸೋಮವಾರ ನಾಮಪತ್ರ ಸಲ್ಲಿಸಿದ ನಂತರ ನಗರಕ್ಕೆ ಹಿಂದಿರುಗಲಿದ್ದಾರೆಂದು ಗೊತ್ತಾಗಿದೆ. ರಾಹುಲ್ ಗಾಂಧಿ ನಾಮಪತ್ರಕ್ಕೆ ಸಂಬಂಧಿಸಿದಂತೆ ರಾಜ್ಯದಿಂದ ಸೂಚಕರಾಗಿ 60 ಮಂದಿ ಸಹಿ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರೂ ಸಹಿ ಮಾಡಿದ್ದಾರೆ.