×
Ad

ವಿಕಲಚೇತನರಿಗೆ ವೃತ್ತಿ ಕೌಶಲ್ಯ ತರಬೇತಿ ಅಗತ್ಯ: ದಿನಕರ ಬಾಬು

Update: 2017-12-03 19:24 IST

ಉಡುಪಿ, ಡಿ.3: ವಿಕಲಚೇತನರು ದೈಹಿಕವಾಗಿ ಅಂಗವಿಕಲರಾದರೂ ಮಾನಸಿಕವಾಗಿ ಸದೃಢರಾಗಿರುತ್ತಾರೆ. ಆದುದರಿಂದ ಅವರ ಏಳಿಗೆಗಾಗಿ ಕಾರ್ಯನಿರ್ವಹಿಸುತ್ತಿರುವ ಸಂಘ ಸಂಸ್ಥೆಗಳು ಅವರಿಗೆ ಸೂಕ್ತ ಮಾರ್ಗದರ್ಶನ ನೀಡಿ ಭವಿಷ್ಯತ್ತಿಗೆ ಸಹಾಯವಾಗುವ ವೃತ್ತಿ ಕೌಶಲ್ಯ ತರಬೇತಿಯನ್ನು ನೀಡುವ ಕೆಲಸ ಮಾಡಬೇಕು ಎಂದು ಉಡುಪಿ ಜಿಪಂ ಅಧ್ಯಕ್ಷ ದಿನಕರ ಬಾಬು ಹೇಳಿದ್ದಾರೆ.

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀ ಕರಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ವಿಕಲಚೇತನರ ಸ್ವಯಂಸೇವಾ ಸಂಸ್ಥೆಗಳು ಮತ್ತು ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ರವಿವಾರ ಮಣಿಪಾಲ ಗ್ರೀನ್ಸ್‌ನಲ್ಲಿ ಆಯೋಜಿಸಲಾದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಜಿಪಂ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ ಮಾತನಾಡಿದರು. ವಿಶೇಷ ಶಾಲೆಯ ಮಕ್ಕಳು ಸಿದ್ದಪಡಿಸಿದ ಕರಕುಶಲ ವಸ್ತುಗಳ ಪ್ರದರ್ಶನವನ್ನು ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಧೀಶೆ ಲತಾ ಉದ್ಘಾಟಿಸಿದರು.

ವಿಶೇಷ ಸಾಧನೆ ಮಾಡಿದ ವಿಶೇಷಚೇತನರಿಗೆ ಹಾಗೂ ಒಟ್ಟು 36 ಫಲಾನು ಭವಿಗಳಿಗೆ ಯಂತ್ರ ಚಾಲಿತ ದ್ವಿಚಕ್ರ ವಾಹನ ವಿತರಿಸಲಾಯಿತು. ಇಬ್ಬರಿಗೆ ಸಾಧಕ ಸಲಕರಣೆ ವೀಲ್‌ಚೇರ್ ನೀಡಲಾಯಿತು. ಕಾರ್ಕಳ ಅರುಣೋದಯ ವಿಶೇಷ ಮಕ್ಕಳ ಶಾಲೆಯ ಎಸೆಸೆಲ್ಸಿ ತೇರ್ಗಡೆಯಾದ ವಿದ್ಯಾರ್ಥಿಗಳನ್ನು ಅಭಿ ನಂದಿಸಲಾಯಿತು.

ಉಡುಪಿ ತಾಪಂ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಅಪರ ಜಿಲ್ಲಾಧಿಕಾರಿ ಅನುರಾಧ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಸಹಕುಲ ಪತಿ ಡಾ.ಪೂರ್ಣಿಮಾ ಬಾಳಿಗ, ಮಂಗಳೂರು ದೃಷ್ಟಿದೋಷವುಳ್ಳ ಮಕ್ಕಳ ವಿಶೇಷ ಶಾಲೆಯ ಪ್ರಾಂಶುಪಾಲೆ ಕೆಲಿಸ್ಟಸ್ ಡೇಸಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಗ್ರೇಸಿ ಗೊನ್ಸಾಲ್ವಿಸ್, ಆಲ್ಮೇಶ್ ಕುಂದನ್, ಡಾ.ಕಾಂತಿ ಹರೀಶ್, ಅರವಿಂದ ಆಚಾರ್ಯ ಉಪಸ್ಥಿತರಿದ್ದರು.

ಉಡುಪಿ ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕ ಸಬಲೀಕರಣ ಅಧಿಕಾರಿ ನಿರಂಜನ್ ಭಟ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News