×
Ad

ಪ್ರತಾಪ್ ಸಿಂಹರನ್ನು ಬೇಷರತ್ ಬಿಡುಗಡೆ ಮಾಡದಿದ್ದರೆ ಹುಣಸೂರು ಬಂದ್ : ಬಿಎಸ್‌ವೈ ಎಚ್ಚರಿಕೆ

Update: 2017-12-03 20:10 IST

ಕಲಬುರಗಿ, ಡಿ. 3: ಮುಖ್ಯಮಂತ್ರಿ ಸಿದ್ದರಾಮಯ್ಯ ಸೇಡಿನ ರಾಜಕಾರಣ ಮಾಡಿ ಸಂಸದ ಪ್ರತಾಪ್ ಸಿಂಹ ಅವರನ್ನು ಬಂಧಿಸಿದ್ದು, ಅವರನ್ನು ಕೂಡಲೇ ಬೇಷರತ್ ಬಿಡುಗಡೆ ಮಾಡದಿದ್ದರೆ ಹುಣಸೂರು ಪಟ್ಟಣ ಬಂದ್ ಗೆ ಕರೆ ನೀಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.

ರವಿವಾರ ಇಲ್ಲಿನ ಅಫ್ಜಲ್‌ಪುರದಲ್ಲಿ ಪರಿವರ್ತನಾ ಯಾತ್ರೆ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರಕಾರದ ತುಘಲಕ್ ದರ್ಬಾರ್ ನಡೆಸುತ್ತಿದೆ. ಇದನ್ನು ಖಂಡಿಸಿ ನಾಳೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದರು.

ಮೈಸೂರಿನ ಹುಣಸೂರು ಪಟ್ಟಣದಲ್ಲಿ ಹನುಮ ಜಯಂತಿ ಆಚರಣೆಗೆ ತೆರಳುತ್ತಿದ್ದ ಸಂಸದ ಪ್ರತಾಪ್ ಸಿಂಹ ಅವರ ಬಂಧನ ಸರಿಯಲ್ಲ. ಹನುಮ ಮಾಲಾಧಾರಿಗಳ ಮೇಲೆ ಲಾಠಿ ಪ್ರಹಾರ ಸರಿಯಲ್ಲ ಎಂದು ಯಡಿಯೂರಪ್ಪ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News