ಒಖಿ ಚಂಡಮಾರುತದ ಆರ್ಭಟ: ಉಳ್ಳಾಲಕ್ಕೆ ಭೇಟಿ
Update: 2017-12-03 23:16 IST
ಮಂಗಳೂರು, ಡಿ.3: ಒಖಿ ಚಂಡಮಾರುತದ ಆರ್ಭಟಕ್ಕೆ ತತ್ತರಿಸಿರುವ ಉಳ್ಳಾಲದ ಮುಕ್ಕಚೇರಿ ಸಿ.ಗ್ರೌಂಡ್, ಹಿಲರಿಯಾ ನಗರಕ್ಕೆ ರಾಜ್ಯ ಸರಕಾರದ ಮುಖ್ಯ ಸಚೇತಕ ಐವನ್ ಡಿಸೋಜ ರವಿವಾರ ಭೇಟಿ ನೀಡಿ ಪರಿಶೀಲಿಸಿದರು.
ಒಖಿ ಚಂಡಮಾರುತದಿಂದ ಆದ ಅನಾಹುತಗಳ ಬಗ್ಗೆ ಮಾಹಿತಿ ಪಡೆದ ಐವನ್ ಡಿಸೋಜ ಮನೆ ಕಳೆದುಕೊಂಡವರಿಗೆ ಪುನರ್ವಸತಿ ಕಲ್ಪಿಸಬೇಕು ಮತ್ತು ಮುಂಜಾಗ್ರತ ಕ್ರಮಕೈಗೊಳ್ಳಬೇಕು, ಸರಕಾರದಿಂದ ಸಿಗುವಂತಹ ಸವಲತ್ತುಗಳನ್ನು ಶೀಘ್ರದಲ್ಲಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಅಪಾರ ಜಿಲ್ಲಾಧಿಕಾರಿ ಕುಮಾರ್, ಮಂಗಳೂರು ಸಹಾಯಕ ಆಯುಕ್ತ ರೇಣುಕಾ ಪ್ರಸಾದ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನಾಮ ನಿರ್ದೇಶಕ ಪಿಯುಸ್ ಮೊಂತೆರೋ, ಸುರೇಶ ಭಟ್‌ನಗರ, ದೀಪಕ್ ಪಿಲಾರ್, ಬಾಝಿಲ್ ಡಿಸೋಜ ಮತ್ತಿತರರು ಉಪಸ್ಥಿತರಿದ್ದರು.