×
Ad

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ನಾಮಪತ್ರ

Update: 2017-12-04 11:07 IST

ಹೊಸದಿಲ್ಲಿ, ಡಿ.4:  ಕಾಂಗ್ರೆಸ್  ಅಧ್ಯಕ್ಷ ಸ್ಥಾನಕ್ಕೆ ನಡೆಯಲಿರುವ   ಚುನಾವಣೆಗೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಇಂದು  ನಾಮಪತ್ರ ಸಲ್ಲಿಸಿದರು.

ದಿಲ್ಲಿಯ ಎಐಸಿಸಿ ಪ್ರಧಾನ ಕಚೇರಿಯಲ್ಲಿ ರಾಹುಲ್ ಗಾಂಧಿ ಅವರು ಅಧ್ಯಕ್ಷ ಸ್ಥಾನಕ್ಕಾಗಿ ಕಾಂಗ್ರೆಸ್ ಪಕ್ಷದ  ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು.

ರಾಹುಲ್ ಗಾಂಧಿ ಅವರ ನಾಮಪತ್ರಕ್ಕೆ    ಕರ್ನಾಟಕದ ಮುಖ್ಯ ಮಂತ್ರಿ  ಸಿದ್ದರಾಮಯ್ಯ ಸೇರಿದಂತೆ ಒಟ್ಟು ಆರು ರಾಜ್ಯಗಳ ಮುಖ್ಯಮಂತ್ರಿಗಳು ಸೂಚಕರಾಗಿ ಮತ್ತು   ಅನುಮೋದಕರಾಗಿ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಸಹಿ ಹಾಕಿದ್ದಾರೆ.

ನಾಮಪತ್ರ ಸಲ್ಲಿಸುವ ಮುನ್ನ ರಾಹುಲ್ ಗಾಂಧಿ ಅವರು ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ, ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ನಿವಾಸಕ್ಕೆ ತೆರಳಿ ಚರ್ಚೆ ನಡೆಸಿದರು. ಅವರೊಂದಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಹಲವು ನಾಯಕರು ಸಾಥ್ ನೀಡಿದರು.

 ಇದಕ್ಕೂ ಮುನ್ನ ರಾಜ್ ಘಾಟ್ ನಲ್ಲಿರುವ ಶಿವ ದೇವಾಲಯಕ್ಕೆ  ರಾಹುಲ್ ಗಾಂಧಿ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.

ಮಧ್ಯಾಹ್ನ 3:00 ಗಂಟೆ ತನಕ ನಾಮಪತ್ರ ಸಲ್ಲಿಕೆಗೆ ಅವಕಾಶ ಇದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News